Advertisement

Karkala ಪರಶುರಾಮ ಥೀಂ ಪಾರ್ಕ್‌ ಪ್ರವೇಶಕ್ಕೆ ತಾತ್ಕಾಲಿಕ ತಡೆ

11:20 PM Oct 07, 2023 | Team Udayavani |

ಉಡುಪಿ: ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್‌ವ್ಯಾಪ್ತಿಯಲ್ಲಿರುವ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವ ಉದ್ದೇಶದಿಂದ ಅ. 9ರಿಂದ ನವೆಂಬರ್‌ ಅಂತ್ಯದವರೆಗೆ ಕಾಲಾವಕಾಶ ಬೇಕಿರುವುದರಿಂದ ಪ್ರವೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಕಾರ್ಕಳ ತಹಶೀಲ್ದಾರ್‌ ತಿಳಿಸಿದ್ದಾರೆ.

Advertisement

ಈ ಥೀಮ್‌ ಪಾರ್ಕ್‌ ಜ. 27ರಂದು ಉದ್ಘಾಟನೆಗೊಂಡು ಪ್ರವಾಸಿಗರ ವೀಕ್ಷಣೆಗೆ ತಾತ್ಕಾಲಿಕವಾಗಿ ಅನುಕೂಲ ಕಲ್ಪಿಸಲಾಗಿತ್ತು. ಈಗ ಕಾಮಗಾರಿಯಲ್ಲಿ ಪರಶುರಾಮಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಯ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಸೆಪ್ಟಂಬರ್‌ ವರೆಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು. ಈಗ ಕಾಮಗಾರಿ ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರದವರು ಅನುಮತಿ ಕೋರಿರುವುದರಿಂದ ನವೆಂಬರ್‌ ಅಂತ್ಯದ ವರೆಗೆ ನಿಷೇಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next