Advertisement

Karkala ಪರಶುರಾಮ ಮೂರ್ತಿ: ಕಾಮಗಾರಿ ತಡೆ ಕೋರಿದ್ದ ಮುತಾಲಿಕ್ ಅರ್ಜಿ ವಜಾ ಮಾಡಿದ ಹೈಕೋರ್ಟ್

12:23 PM Oct 11, 2023 | Team Udayavani |

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನಲ್ಲಿನ ಪರಶುರಾಮ ಮೂರ್ತಿಯ ಕಾಮಗಾರಿಗೆ ತಡೆ ಕೋರಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿದೆ. ಅಲ್ಲದೆ ಕಲ್ಪನೆಗಳ ಆಧಾರದಲ್ಲಿ ಅರ್ಜಿ ಹಾಕಲಾಗಿದೆ ಎಂದು ಕೋರ್ಟ್ ಅರ್ಜಿದಾರರಿಗೆ ತರಾಟೆಗೆ ತೆಗೆದುಕೊಂಡಿದೆ.

Advertisement

ಪರಶುರಾಮ ಥೀಮ್ ಪಾರ್ಕನ್ನು ಗೋಮಾಳ ಜಾಗದಲ್ಲಿ ನಿರ್ಮಿಸಲಾಗುತ್ತಿದೆ, ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಪ್ರಮೋದ್ ಮುತಾಲಿಕ್ ಮತ್ತು ಬೆಂಗಳೂರಿನ ಎಸ್.ಭಾಸ್ಕರನ್ ಎಂಬವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾ ಮಾಡಿದೆ.

ಇದನ್ನೂ ಓದಿ:Hamas War: ವ್ಹೀಲ್ ಚೇರ್ ನಲ್ಲಿ ಕುಳಿತು ಇಸ್ರೇಲ್ ಮೇಲೆ ಪ್ರತೀಕಾರ; ಈತನೇ ಹೊಸ ಬಿನ್ ಲಾಡೆನ್

“ಅರ್ಜಿದಾರರಿಬ್ಬರೂ ಆ ಗ್ರಾಮದವರಲ್ಲ. ಒಬ್ಬರು ಧಾರವಾಡದವರು ಮತ್ತೋರ್ವ ಬೆಂಗಳೂರಿನವರು. ಕಲ್ಪನೆಗಳ ಆಧಾರದಲ್ಲಿ ಈ ಅರ್ಜಿ ಹಾಕಲಾಗಿದೆ. ಮೂರ್ತಿ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಈ ಹಿಂದೆ ಆಕ್ಷೇಪ ಹಾಕದೆ, ಮುಗಿಯುವ ಹಂತದಲ್ಲಿ ತಡವಾಗಿ ಕೋರ್ಟ್ ಗೆ ಬಂದಿದ್ದಾರೆ” ಎಂದು ಪೀಠ ಹೇಳಿದೆ.

ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗುತ್ತಿದೆ. ಇಲ್ಲಿ 33 ಅಡಿಯ ಪರಶುರಾಮ ಮೂರ್ತಿಯ ಸದ್ಯ ಮುಕ್ತಾಯದ ಹಂತದ ಕಾಮಗಾರಿ ನಡೆಯುತ್ತಿದೆ. ಅರ್ಜಿದಾರರಲ್ಲಿ ಒಬ್ಬರಾದ ಪ್ರಮೋದ್ ಮುತಾಲಿಕ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next