Advertisement

Karkala ಥೀಂ ಪಾರ್ಕ್‌ಗೆ ಬಿಡುಗಡೆ ಆಗಿದ್ದೇ 6 ಕೋಟಿ ರೂಪಾಯಿ: ಶಾಸಕ ಸುನೀಲ್‌

11:22 PM Jul 21, 2024 | Team Udayavani |

ಬೆಂಗಳೂರು: ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ ಯೋಜನೆಗೆ ಇದುವರೆಗೆ ಬಿಡುಗಡೆ ಆಗಿರುವುದೇ 6 ಕೋಟಿ ರೂ. ಆದರೆ ಕಾಮಗಾರಿಯಲ್ಲಿ 11 ಕೋಟಿ ರೂ. ಹಗರಣ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಓರ್ವ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಲು ನಾಚಿಕೆ ಆಗಬೇಕು ಎಂದು ಶಾಸಕ ವಿ. ಸುನೀಲ್‌ ಕುಮಾರ್‌ ಕಿಡಿಕಾರಿದ್ದಾರೆ.

Advertisement

ಈ ಕುರಿತು ಪ್ರಕಟನೆ ನೀಡಿರುವ ಅವರು, ಪರಶುರಾಮ ಥೀಂ ಪಾರ್ಕ್‌ನಲ್ಲಿ ಅವ್ಯವಹಾರ ನಡೆದಿದೆ ಎಂದು ಕಳೆದ 1 ವರ್ಷದಿಂದ ಕಾಂಗ್ರೆಸ್‌ ನಾಯಕರು ಸುಳ್ಳು ಕತೆಗಳನ್ನು ಕಟ್ಟುತ್ತಲೇ ಇದ್ದಾರೆ. ಇವರಿಗೆ ಸತ್ಯ ಬಹಿರಂಗವಾಗುವುದು ಬೇಕಿಲ್ಲ, ಪ್ರವಾಸೋದ್ಯಮ ಅಭಿವೃದ್ಧಿಯಾಗುವುದು ಬೇಕಿಲ್ಲ. ನಿರಂತರ ಆರೋಪ ನಡೆಸಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಮಾತ್ರ ಉದ್ದೇಶ. ಪ್ರತಿ ಬಾರಿಯೂ ಅಧಿವೇಶನ ಸಂದರ್ಭದಲ್ಲಿ ಥೀಂ ಪಾರ್ಕ್‌ ಬಗ್ಗೆ ಅಪಪ್ರಚಾರ ನಡೆಸುವುದು ಈ ಸರಕಾರಕ್ಕೆ ಹಾಗೂ ಕಾರ್ಕಳ ಕಾಂಗ್ರೆಸ್‌ ಮುಖಂಡರಿಗೆ ಚಟವಾಗಿಬಿಟ್ಟಿದೆ ಎಂದಿದ್ದಾರೆ.

ಕಳೆದ ಅಧಿವೇಶನದ ಸಂದರ್ಭದಲ್ಲೇ ತನಿಖೆ ನಡೆಸುತ್ತೇವೆ ಎಂದಿದ್ದರು. ಸಿಐಡಿ ತನಿಖೆಗೂ ಸೂಚಿಸಿದರು. ಆದರೆ, ಇದುವರೆಗೆ ತನಿಖೆ ಪ್ರಗತಿಯಾಗಿಲ್ಲ. ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಿ ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು. ಆದರೆ, ಚುನಾವಣೆ ನೀತಿ ಸಂಹಿತೆಯ ನೆಪ ಹೇಳಿ ತಪ್ಪಿಸಿಕೊಂಡರು ಎಂದವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next