Advertisement
ಒಂದು ಕಿ. ಮೀ. ವ್ಯಾಪ್ತಿಯ ರಸ್ತೆ ಸಂಪೂರ್ಣ ಹದಗೆಟ್ಟು ಹೊಂಡ ಗುಂಡಿಗಳಿಂದ ಕೂಡಿದೆ. ಮಳೆಗಾಲದಲ್ಲಿ ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ಹಲವು ಮಂದಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಪ್ರಸ್ತುತ ಬೇಸಗೆಯಲ್ಲಿಯೂ ಜನರಿಗೆ ನಾನ ರೀತಿಯ ತೊಂದರೆಗಳು ಎದುರಾಗುತ್ತಿದೆ. ರಸ್ತೆಯಲ್ಲಿ ಡಾಮರಿಗಿಂತ ಜಾಸ್ತಿ ಗುಂಡಿಗಳೇ ಹೆಚ್ಚಿದ್ದು, ಕೊಂಚ ಎಚ್ಚರ ತಪ್ಪಿದರೂ ದ್ವಿಚಕ್ರ ವಾಹನ ಸವಾರರು ಬಿದ್ದು ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಈ ರಸ್ತೆಯಲ್ಲಿ ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಸಾಕಷ್ಟು ಮಂದಿ ಸಂಚರಿಸುತ್ತಾರೆ. ಹಲವಾರು ವರ್ಷಗಳಿಂದ ರಸ್ತೆ ಅಭಿವೃದ್ಧಿಯಾಗದೇ ನಿತ್ಯ ಓಡಾಡುವ ಜನರಿಗೆ ಸಮಸ್ಯೆಯಾಗಿದೆ. ರಸ್ತೆ ಅಭಿವೃದ್ಧಿಗೆ ಪುರಸಭೆ ಶೀಘ್ರ ಮುಂದಾಗುವಂತೆ ನಾಗರಿಕರು ಬೇಡಿಕೆ ಇಟ್ಟಿದ್ದಾತೆ.
ರಸ್ತೆಯ ಎರಡು ಬದಿ ತ್ಯಾಜ್ಯವನ್ನು ಎಸೆದ ಪರಿಣಾಮ ಕೊಳಚೆಗೇರಿ ವಾತಾವರಣ ನಿರ್ಮಾಣ ವಾಗಿದೆ. ತ್ಯಾಜ್ಯದಿಂದ ದುರ್ವಾಸನೆ ಹರಡುತ್ತಿದ್ದು, ಸುತ್ತಮುತ್ತಲಿನವರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ತ್ಯಾಜ್ಯ ರಾಶಿಯಲ್ಲಿ ಹಸಿಕಸ, ಒಣ ಕಸ ಸಹಿತ 2 ಮಾದರಿಯ ತ್ಯಾಜ್ಯವನ್ನು ಎಸೆಯಲಾಗಿದೆ. ರಾತ್ರಿವೇಳೆ ಅಪರಚಿತರು ಬೈಕ್‌ಗಳಲ್ಲಿ ಬಂದು ತ್ಯಾಜ್ಯ ಎಸೆದು ಹೋಗುತ್ತಿದ್ದಾರೆ ಪುರಸಭೆ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.