Advertisement

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

02:33 AM Nov 25, 2024 | Team Udayavani |

ಕಾರ್ಕಳ: ಕಾರ್ಕಳದಲ್ಲಿ ನಡೆಯುವ ಲಕ್ಷ ದೀಪೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ಅಂಗಡಿ ಹಾಕಲು ಅವಕಾಶ ನೀಡಬೇಕೆಂಬ ಬೇಡಿಕೆಯನ್ನು ಕೆಲವರು ಮುಂದಿಟ್ಟಿದ್ದಾರೆ ಎಂದು ಮತ್ತು ಈ ಬೇಡಿಕೆಯಿಂದಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುವ ಸಾಧ್ಯತೆ ಇದೆಯೆಂದು ಆರೋಪಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಕಾರ್ಕಳದ ರಮೇಶ್‌ ಶೆಟ್ಟಿ ಮತ್ತು ಇತರ ಇಬ್ಬರು ಸಮುದಾಯದೊಳಗಿನ ಶಾಂತಿ ಕದಡುವ ಉದ್ದೇಶದಿಂದ ಸ್ಥಳೀಯವಾಗಿ ಹೇಳಿಕೆ ನೀಡಿದ್ದ ಆರೋಪದ ಮೇರೆಗೆ ಕಾರ್ಕಳ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯದಿದ್ದರೆ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕುವ ಹಿಂಜಾವೇ ಮುಖಂಡರ ಹೇಳಿಕೆ ವೀಡಿಯೋ ವೈರಲ್‌ ಆಗಿದ್ದು, ಇದನ್ನು ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ದೂರಲಾಗಿದೆ.

ಅದರಂತೆ ಕಾರ್ಕಳ ನಗರ ಪೊಲಿಸ್‌ ಠಾಣೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪೊಲೀಸ್‌ ಇಲಾಖೆ ಕ್ರಮವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು, ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next