ಕಾರ್ಕಳ: ಮೀನು ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ಕಾರ್ಕಳದ ನಲ್ಲೂರು ಸಮೀಪದ ಪರಪ್ಪಾಡಿಯಲ್ಲಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಜೂ.3ರಂದು ನಡೆದಿದೆ.
Advertisement
ಮಲ್ಪೆಯಿಂದ ಬೆಂಗಳೂರಿಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ವೇಳೆ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಚಾಲಕ ಸಹಿತ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ: ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು