ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ರೈತರು, ಅರೆಬೆತ್ತಲಾಗಿ, ತಲೆ ಕೆಳಗಾಗಿ ನಿಂತು ವಿಭಿನ್ನವಾಗಿ ಪ್ರತಿಭಟನೆ ಆರಂಭಿಸಿದರು.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆ 5.30ಕ್ಕೆ ಗಾಂಧಿ ವೃತ್ತಕ್ಕೆ ಆಗಮಿಸಿದ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ರೈತ ಸಂಘದ ಕಾರ್ಯಕರ್ತರು ಅರೆಬೆತ್ತಲಾಗಿ, ನಡು ರಸ್ತೆಯಲ್ಲಿ ತಲೆ ಕೆಟ್ಟಗಾಗಿ ನಿಂತು ಪ್ರತಿಭಟಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಲಿಂಗಾವರಹಟ್ಟಿ ಲಕ್ಷ್ಮೀಕಾಂತ್ ಶೀರ್ಷಾಸನ ಮಾದರಿಯಲ್ಲಿ ತಲೆ ಕೆಳಗೆ ಮಾಡಿ ನಿಲ್ಲುವ ಪ್ರಯತ್ನ ಮಾಡಿದಾಗ ಪೊಲೀಸರು ತಡೆಯಲು ಮುಂದಾದರು. ಬಟ್ಟೆ ಹಾಕಿಕೊಂಡು ರಸ್ತೆ ಬಿಟ್ಟು ಬದಿಗೆ ಬಂದು ಪ್ರತಿಭಟಿಸಿ ಎಂದರು. ಈ ವೇಳೆ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಕಡೆಗೆ ನಡು ರಸ್ತೆಯಲ್ಲಿ ಶೀರ್ಷಾಸನ ಮಾಡಿ ಪ್ರತಿಭಟಿಸಿದರು.
ಇದನ್ನೂ ಓದಿ:ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ