ಬೆಂಗಳೂರು: ಕರ್ನಾಟಕದಲ್ಲಿ ಪದವಿ ಕಲಿಯುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಒಂದು ವಿಷಯವನ್ನಾಗಿ ಕಲಿಯಬೇಕು ಎಂದು ಷರತ್ತು ವಿಧಿಸಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಸರಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ ರಾಜ್ಯ ಸರಕಾರಕ್ಕೆ ಮಂಗಳವಾರ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಸರಕಾದ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಉದ್ಯೋಗಕ್ಕಾಗಿ ಕನ್ನಡ ಕಲಿಕೆಯ ಷರತ್ತು ವಿಧಿಸಿ. ಆದರೆ, ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಹೇರಲಾಗದು.
ಉದ್ಯೋಗಕ್ಕಾಗಿ ಕನ್ನಡ ಕಲಿಯುವುದು ವಿದ್ಯಾರ್ಥಿಗಳಿಗೆ ಬಿಟ್ಟ ವಿಚಾರ. ಸರಕಾರ ಯಾಕೆ ಕಡ್ಡಾಯಗೊಳಿಸಬೇಕು. ಆದ್ದರಿಂದ ಸರಕಾರ ತನ್ನ ನಿರ್ಧಾರ ಮರು ಪರಿಶೀಲಿಸಬೇಕು. ಇಲ್ಲದಿದ್ದರೆ ಆದೇಶಕ್ಕೆ ತಡೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.
ಅಗ, ಈ ವಿಚಾರದ ಬಗ್ಗೆ ಸರಕಾರದಿಂದ ಹೆಚ್ಚಿನ ಮಾಹಿತಿ ಪಡೆದು ನ್ಯಾಯಾಲಯದ ಮುಂದೆ ಮಂಡಿಸಲಾಗುವುದು ಎಂದು ಅಡ್ವೋಕೇಟ್ ಜನರಲ್ ಹೇಳಿದರು. ಅದಕ್ಕೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ನ.10ಕ್ಕೆ ಮುಂದೂಡಿತು.
ಇದನ್ನೂ ಓದಿ : ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ