Advertisement

Karnataka: ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ

11:01 PM Feb 01, 2024 | Team Udayavani |

ಬೆಂಗಳೂರು: ಅರಣ್ಯ ಮತ್ತು ಗೃಹ ಇಲಾಖೆಯ ನೇಮಕಾತಿ ವೇಳೆ ಕ್ರೀಡಾಪಟುಗಳಿಗೆ ನೀಡುತ್ತಿರುವ ಶೇ.2ರಷ್ಟು ಮೀಸಲಾತಿಯನ್ನು ರಾಜ್ಯ ಸಿವಿಲ್‌ ಸೇವೆಗಳ ನೇರ ನೇಮಕಾತಿಗೂ ಅನ್ವಯಿಸಲು ಸರಕಾರ ನಿರ್ಧರಿಸಿದೆ.

Advertisement

ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ 3ನೇ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ಸಭೆಯ ಬಳಿಕ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ವಿವರಣೆ ನೀಡಿದರು.

ರಾಜ್ಯ ಸಿವಿಲ್‌ ಸೇವೆಗಳ ನೇರ ನೇಮಕಾತಿ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ನೀಡುವ ಸಲುವಾಗಿ 1977ರ ಕರ್ನಾಟಕ ಸಿವಿಲ್‌ ಸೇವಾ (ಸಾಮಾನ್ಯ ನೇಮ
ಕಾತಿ) ನಿಯಮ 9ಕ್ಕೆ ತಿದ್ದುಪಡಿ ತಂದಿದ್ದು, ಕರ್ನಾಟಕ ಸಿವಿಲ್‌ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮ-2024ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಗಣನೀಯ ಸಾಧನೆ ಮಾಡಿದವರಿಗೆ ಮಾತ್ರ ಇದು ಅನ್ವಯವಾಗಲಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆ
2023-24ನೇ ಸಾಲಿಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ 69,899 ಅಂಗನವಾಡಿ ಕಾರ್ಯಕರ್ತೆಯರು ಮತ್ತು 67,570 ಸಹಾಯಕಿಯರು ಸಹಿತ ಒಟ್ಟು 1,37,469 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ರಿಗೆ ತಲಾ ಎರಡು ಸೀರೆಗಳಂತೆ ಒಟ್ಟು 2,74,938 ಸೀರೆಗಳನ್ನು 13.75 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಿ ಒದಗಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಮೇವು ಕಿಟ್‌
ರಾಜ್ಯದ ಬರಗಾಲ ಹಾಗೂ ಪರಿಹಾರ ಕಾಮಗಾರಿಗಳ ಕುರಿತಂತೆ ಮುಖ್ಯಮಂತ್ರಿಯವರೇ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚೆ ನಡೆಸಿದ್ದು, ಮುಂದಿನ ದಿನ ಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಎದುರಾಗ ದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಹೆಚ್ಚಿನ ನಿಗಾ ಇಡಬೇಕು ಎಂದಿದ್ದಾರೆ.
223 ಬರಪೀಡಿತ ತಾಲೂಕುಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಎಸ್‌ಡಿಆರ್‌ಎಫ್ ನಿಧಿಯಿಂದ 20 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದರಲ್ಲಿ ಆಫ್ರಿಕನ್‌ ಟಾಲ್‌ ಮೇಜ್‌ (ಎಟಿಎಂ), ಸೋರ್ಗಂ ಮಲ್ಟಿಕಟ್‌ ವಿಧದ 7,63,354 ಮೇವಿನ ಬೀಜದ ಮಿನಿ ಕಿಟ್‌ಗಳನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮೂಲಕ ಖರೀದಿಸಿ ರೈತರಿಗೆ ಉಚಿತವಾಗಿ ವಿತರಿಸಲು ಅನುಮೋ ದನೆಯನ್ನೂ ಸಂಪುಟ ಸಭೆ ನೀಡಿದೆ.

Advertisement

ಸಹಕಾರ ಸಂಘಗಳ ನಿಬಂಧಕರ ಕಚೇರಿ ಆವರಣದಲ್ಲಿ ಸಹಕಾರ ಸಮೃದ್ಧಿ ಸೌಧ ನಿರ್ಮಿಸಲು 14.85 ಕೋ. ರೂ. ನೀಡಿದ್ದು, ಮೊದಲ ಹಂತದ ಕಾಮ ಗಾರಿಗೆ 9.85 ಕೋ.ರೂ. ಮತ್ತು 2ನೇ ಹಂತದ ಕಾಮಗಾರಿಗೆ 5 ಕೋ. ರೂ. ಬಿಡುಗಡೆ ಮಾಡಲಾಗುತ್ತದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next