ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಬುಧವಾರ(ಏ.10) ಪ್ರಕಟಗೊಂಡಿದ್ದು,ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದಿದ್ದು,ಉಡುಪಿ ಜಿಲ್ಲೆ ರಾಜ್ಯದಲ್ಲೇ ದ್ವಿತೀಯ ಸ್ಥಾನ ಪಡೆದಿದೆ.
ಇದನ್ನೂ ಓದಿ:Bengaluru; ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ವಕೀಲೆಯನ್ನು ವಿವಸ್ತ್ರ ಗೊಳಿಸಿ ಬ್ಲಾಕ್ ಮೇಲ್!
ವಿಜ್ಞಾನ ವಿಭಾಗದಲ್ಲಿ ವಿದ್ಯೋದಯ ಪಿಯು ಕಾಲೇಜಿನ ವಿದ್ಯಾರ್ಥಿನಿ ವೈಭವಿ ಆಚಾರ್ಯ 597 ಅಂಕ, ಕಾರ್ಕಳ ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿ ಸಮ್ಯಕ್ ಆರ್. ಪ್ರಭು 595 ಅಂಕ, ವಾಣಿಜ್ಯ ವಿಭಾಗದಲ್ಲಿ ಪೂರ್ಣಪ್ರಜ್ಞ ಪಿಯು ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ಎಸ್.ಎಚ್ 596 ಅಂಕ ಪಡೆಯುವ ಮೂಲಕ ರಾಜ್ಯ ಟಾಪರ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆ ಹೊಸ ವಿದ್ಯಾರ್ಥಿಗಳ ಒಟ್ಟಾರೆ ಶೇ.96.80 ಫಲಿತಾಂಶ ಪಡೆದಿದ್ದಾರೆ. ಕಳೆದ ವರ್ಷ ಶೇ.95.24ರಷ್ಟು ಫಲಿತಾಂಶ ಪಡೆದಿದ್ದಾರೆ.
ನೀವು ಮೊದಲು ನಿಮ್ಮ ಮೊಬೈಲ್‌ನಲ್ಲಿ ಕರ್ನಾಟಕ ಶಾಲಾ ಪರೀಕ್ಷೆಯ ಅಧಿಕೃತ ವೆಬ್‌ಸೈಟ್ karresults.nic.in ಅಂತಾ ಟೈಪ್ ಮಾಡಿ ಗೂಗಲ್‌ನಲ್ಲಿ ಸರ್ಚ್ ಮಾಡಿ. ನಂತರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ವಿವರಗಳನ್ನು ಹಾಕಿ ಕ್ಲಿಕ್ ಮಾಡಿದರೆ ನಿಮ್ಮ ಫಲಿತಾಂಶ ಲಭ್ಯವಾಗಲಿದೆ.
ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದಿದ್ದು, ಶೇ.97ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶೇ.96.80 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ.94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನ ಪಡೆದಿದ್ದು ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರಕಿದೆ.