Advertisement

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

12:14 AM Nov 23, 2024 | Team Udayavani |

ಹೊಸದಿಲ್ಲಿ: ಕರ್ನಾಟಕದ 5,949 ಗ್ರಾಮ ಪಂಚಾಯತ್‌ಗಳಿಗೆ 15ನೇ ಹಣಕಾಸು ಆಯೋಗ ಅನುದಾನವನ್ನು ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 448.29 ಕೋಟಿ ರೂ.ಗಳನ್ನು ಬಿಡಗಡೆ ಮಾಡಲಾಗಿದೆ ಎಂದು ಕೇಂದ್ರ ಪಂಚಾಯತ್‌ ರಾಜ್‌ ಸಚಿವಾಲಯ ಹೇಳಿದೆ.

Advertisement

ವೇತನ ಮತ್ತು ಸ್ಥಾಪನ ವೆಚ್ಚಗಳಿಗೆ ಬಳಸದೆ ಸ್ಥಳೀಯ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಗ್ರಾಮ ಪಂಚಾಯತ್‌ಗಳು ಬಳಕೆ ಮಾಡಿಕೊಳ್ಳಬಹುದು. ಬಯಲು ಶೌಚ ಮಕ್ತ ಆಂದೋಲನ, ಸ್ವಚ್ಛತೆ, ಕಸ ಸಂಗ್ರಹಣೆ, ಕುಡಿಯುವ ನೀರು ಪೂರೈಕೆ, ಮಳೆ ನೀರು ಕೊಯ್ಲು, ನೀರಿನ ಮರುಬಳಕೆ ಕಾರ್ಯಕ್ರಮಗಳಿಗೆ ಈ ಹಣವನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಗ್ರಾಮ ಪಂಚಾಯತ್‌ಗಳನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರವು 15ನೇ ಹಣಕಾಸು ಆಯೋಗದ ಅನುದಾನವನ್ನು ಬಿಡುಗಡೆ ಮಾಡಿದೆ. ಇದು ಸ್ಥಳೀಯ ಸರಕಾರಗಳು ಮತ್ತಷ್ಟು ಪರಿಣಾಮಕಾರಿಯಾಗಿ, ಜವಾಬ್ದಾರಿಯುತವಾಗಿ, ಸ್ವತಂತ್ರ ವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ ಎಂದು ಸಚಿವಾಲಯ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next