Advertisement

ಬೆಂಗಳೂರು: ರಾಜ್ಯಾದ್ಯಂತ 74 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.ಆಯಾಯ ಜಿಲ್ಲೆ ಉಸ್ತುವರಿ ಸಚಿವರುಗಳ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿತು.

Advertisement

ಚಿತ್ರದುರ್ಗ:  ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಸ್ವಾತಂತ್ರ್ಯ ನಮಗೆ ಸಿಕ್ಕಿದ್ದು ಹೋರಾಟದಿಂದಲೇ ಹೊರತು ಬ್ರಿಟೀಷರು ಸಾಕಾಗಿ ಕೊಟ್ಟು ಹೋಗಿದ್ದಲ್ಲ. ಯಾರಾದರೂ ಹಣ ಕೊಡಬಹುದೇ ಹೊರತು ಸ್ವಾತಂತ್ರ್ಯವನ್ನಲ್ಲ ಎಂದರು.

ಜಗತ್ತಿಗೆ ಮಾದರಿ ಎನ್ನಿಸುವ ಸಂವಿಧಾನವನ್ನು ಡಾ.ಬಿ.ಆರ್.‌ಅಂಬೇಡ್ಕರ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

Advertisement

ಕೊಪ್ಪಳ: ಕೊಪ್ಪಳದಲ್ಲಿ 74ನೇ ಗಣ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಸಚಿವ ಆನಂದ ಸಿಂಗ್‌ ನೆರವೇರಿಸಿದರು.

ಜಿಲ್ಲಾ ಕ್ರೀಗಾಂಣದಲ್ಲಿ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಅವರಿಂದ ಪರೇಡ್ ನಡೆಯಿತು. ವಿದ್ಯಾರ್ಥಿಗಳ ಪಥ ಸಂಚಲನದಲ್ಲಿ 17 ತಂಡಗಳು ಭಾಗಿಯಾಗಿತ್ತು.

ದಾವಣಗೆರೆ: ದಾವಣಗೆರೆಯಲ್ಲಿ 74ನೇ ಗಣ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ನೆರವೇರಿಸಿದರು.

ಭಾರತ ದೇಶವು ಸಾರ್ವಭೌಮತೆಯ ಜ್ಯಾತ್ಯಾತೀತತೆ ಮತ್ತು ಪುಜಾಸತ್ತಾತ್ಮಕತೆಯ ಭದ್ರ ತಳಹದಿಗಳ ಮೇಲೆ ನಿರ್ಮಿತವಾದ ಬಲಿಷ ಗಣರಾಜ್ಯವಾಗಿದೆ.  ದೇಶವು ಸಾರ್ವಭೌಮತೆಯ ಸಾಮಾಜಿಕ ನ್ಯಾಯದ ಜ್ಯಾತ್ಯಾತೀತತೆ ಮತ್ತು ಪ್ರಜಾಸತ್ತಾತ್ಮಕತೆಯ ಭದ್ರ ತಳಹದಿಗಳ ಮೇಲೆ ನಿರ್ಮಿತವಾದ ಬಲಿಷ್ಠ ಗಣರಾಜ್ಯವಾಗಿದೆ. ಭಾರತವನ್ನು ವಿಶ್ವಮಾನ್ಯ ಹಾಗೂ ಬಲಾಢ್ಯ ಗಣರಾಜ್ಯವನ್ನಾಗಿ ರೂಪಿಸುವಲ್ಲಿ ತಮ್ಮ ತನು-ಮನ-ಧನಗಳಿಂದ ತ್ಯಾಗ, ಬಲಿದಾನ ಮಾಡಿದ ಮೇರು ನಾಯಕರುಗಳನ್ನು, ಅಸಂಖ್ಯಾತ ಯೋಧರನ್ನು ದೇಶಾಭಿಮಾನಿಗಳನ್ನು ಕೃತಜ್ಞತಾ ಭಾವನೆಯಿಂದ ನನೆಯುವುದು ಮತ್ತು ಅವರು ಆಶಿಸಿದಂತೆ, ನಮ್ಮ ರಾಷ್ಟ್ರವನ್ನು ಇನ್ನಷ್ಟು ಅಭ್ಯುದಯದ ಪಥದಲ್ಲಿ ಮುನ್ನಡೆಸುವುದು. ಭಾರತೀಯರಾದ ಕರ್ತವ್ಯವಾಗಿದೆ. ದೇಶದ ಅಖಂಡತೆಯ ಪ್ರತೀಕವಾದ ನಮ್ಮ ಸಂವಿಧಾನವನ್ನು 1950ರ ಜನವರಿ 26ರಂದು ಇಡೀ ದೇಶಕ್ಕೆ ಏಕೈಕ ಪೌರತ್ವವನ್ನು ಉಪಬಂಧಿಸಿ, ಎಲ್ಲಾ ಪೌರರಿಗೆ ಮೂಲಭೂತ ಹಕ್ಕುಗಳನ್ನು ದಯಪಾಲಿಸಿ, ಪ್ರಜೆಗಳು ಜವಾಬ್ದಾರಿಯುತವಾಗಿ ವರ್ತಿಸಲು ಮೂಲಭೂತ ಕರ್ತವ್ಯಗಳನ್ನು ಸಹ ಸಂವಿಧಾನವು ನೀಡಿದೆ.ಇಂತಹ ಮಹತ್ ಪ್ರೇರಣಾದಾಯಕವಾದ ದಿನವಾದ ಇಂದು, ನಾವುಗಳು  ಸಂವಿಧಾನದ ವಿಧಿವಿಧಾನಗಳ ಅನುಷ್ಠಾನದ ಚರ್ಚೆಯಲ್ಲಿ ಪಾಲ್ಗೊಂಡ ಎಲ್ಲಾ ದಿಗ್ಗಜರನ್ನು ಕೃತಜ್ಞತಾಪೂರ್ವಕವಾಗಿ ಸ್ಮರಿಸಬೇಕಾಗಿದೆ ಎಂದರು.

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ.26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಉಡುಪಿ:  74ನೇ ಗಣ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ನೆರವೇರಿಸಿ, ಅಜ್ಜರಕಾಡಿನಲ್ಲಿನ ಹುತಾತ್ಮ ಸ್ಮಾರಕಕ್ಕೆ ಸಚಿವ ಅಂಗಾರ ಗೌರವ ಸಲ್ಲಿಸಿದರು.

ಕಲಬುರಗಿ:  ಉಸ್ತುವಾರಿ ಸಚಿವ ನಿರಾಣಿಯಿಂದ 74ನೇ ಗಣ ರಾಜ್ಯೋತ್ಸವದ  ರಾಷ್ಟ್ರ ಧ್ವಜಾರೋಹಣ ನೆರವೇರಿತು.

ಈ ವೇಳೆ ಮಾತನಾಡಿದ ಅವರು, ಸೂರತ್ – ಚೆನ್ನೈ ಪ್ರವೇಶ ನಿಯಂತ್ರಿತ ಗ್ರೀನ್ ಫೀಲ್ಡ್ ಹೈವೇ ಕಲ್ಯಾಣ ಕರ್ನಾಟಕ ಭಾಗದ ಕೃಷಿ, ಕೈಗಾರಿಕಾ ಹಾಗೂ ಆರ್ಥಿಕತೆಗೆ ಉತ್ತೇಜನ ದೊರಕಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ಜಿಲ್ಲೆಯಲ್ಲಿ ಹಾದು ಹೋಗುವ 2110.52 ಕೋ.ರೂ ಮೊತ್ತದ 71 ಕೀ.ಮೀ ಕಾಮಗಾರಿಗೆ ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಒಟ್ಟಾರೆ ಈ ಕಾಮಗಾರಿ ಸಾಕಾರಗೊಂಡಲ್ಲಿ ಈ ಭಾಗದ ಸಮಗ್ರ ಅಭಿವೃದ್ಧಿ ಗೆ ಪೂರಕವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಳೆದ ನವ್ಹೆಂಬರ್ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಫಲವಾಗಿ ರಾಜ್ಯವು 9.81 ಲಕ್ಷ ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, 6 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ಬೆಂಗಳೂರು ಹೊರಾಚೆ ಹೂಡಿಕೆಗೆ ಆಧ್ಯತೆ ನೀಡಲಾಗುವುದು. ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ದೊರಕಲಿವೆ ಎಂದು ಸಚಿವ ನಿರಾಣಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next