Advertisement
ಎಫ್ ಐ ಸಿಸಿ ಶೃಂಗಸಭೆ ಪಾಲ್ಗೊಂಡು ಕೃಷಿ ನವೋದ್ಯಮಿಗಳಿಗೆ ಅನ್ಲೈನ್ ಮೂಲಕ ಪ್ರಶಸ್ತಿ ಪ್ರದಾನ ಮಾಡಿ ಸಚಿವರು ಮಾತನಾಡಿದರು.
Related Articles
Advertisement
ಸರ್ಕಾರದ ನೀತಿ ಹಾಗೂ ಪರಿವರ್ತನೆಯ ಬದಲಾವಣೆಗೆ ತಕ್ಕಂತೆ ಉದ್ಯಮಗಳು ಬದಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕೃಷಿಯನ್ನು ಕೃಷಿ ಉದ್ಯಮವನ್ನು ವೃದ್ಧಿಸಬೇಕಿದೆ. ಕೃಷಿಯನ್ನು ಉದ್ಯಮವನ್ನಾಗಿಸಲು ಕೃಷಿಕರನ್ನು ಕೃಷಿ ಉದ್ಯಮಿಗಳನ್ನಾಗಿಸುವ ಉದ್ದೇಶದಿಂದ ರಾಜ್ಯದಲ್ಲಿ ಕೃಷಿ ನವೋದ್ಯಮ (ಅಗ್ರಿ ಸ್ಟಾರ್ಟಪ್) ಆರಂಭಿಸುವುದಕ್ಕಾಗಿ ಕೃಷಿ ನವೋದ್ಯಮ ನೀತಿಗಳನ್ನು ರೂಪಿಸಿ ಅದಕ್ಕಾಗಿ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿ ವರದಿ ನೀಡಿದೆ. ಅಗ್ರಿ ಸ್ಟಾರ್ಟಪ್ ಸಮಿತಿಯು ನೀಡಿರುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದರು.
ಇತರೆ ಸ್ಟಾರ್ಟಪ್ ಗಳ ಮಾದರಿಯಲ್ಲಿಯೇ ಕೃಷಿ ನವೋದ್ಯಮ (ಅಗ್ರಿ ಸ್ಟಾರ್ಟಪ್)ವನ್ನು ಸಹ ಹೆಚ್ಚಿಸಬೇಕಿದೆ. ಭಾರತೀಯ ಕೃಷಿಯಲ್ಲಿ ಸುಸ್ಥಿರ ಮತ್ತು ನವೀನತೆ ಕಲ್ಪಿಸಲು ಎಫ್ಐಸಿಸಿಐ ವಿವಿಧ ವಿಭಾಗಗಳಿಂದ ಕೃಷಿ ಸ್ಟಾರ್ಟ್ ಅಪ್ಗಳನ್ನು ಆಯ್ಕೆ ಮಾಡಿಕೊಂಡಿರುವುದು ಶ್ಲಾಘನೀಯ. ಎಫ್.ಐ.ಸಿ.ಸಿ. ಕರ್ನಾಟಕ ರಾಜ್ಯ ಕೌನ್ಸಿಲ್ ಮುಖ್ಯಸ್ಥರೊಂದಿಗೆ ಇತ್ತೀಚೆಗೆ ಕರ್ನಾಟಕದಲ್ಲಿ ಅಗ್ರಿ ಸ್ಟಾರ್ಟ್ ಅಪ್ ಗಳನ್ನು ಉತ್ತೇಜಿಸುವ ಸಂಬಂಧ ಚರ್ಚಿಸಿದ್ದು, ಅದರಂತೆ ಕರ್ನಾಟಕದಲ್ಲಿ ಸೂಕ್ತವಾದ ಕೃಷಿ ಪರಿಸರ ವ್ಯವಸ್ಥೆ ಮತ್ತು ಅಗ್ರಿ ಸ್ಟಾರ್ಟ್ ಅಪ್ ಗಳನ್ನು ಅಭಿವೃದ್ಧಿಪಡಿಸುವಲ್ಲಿ ಅಗ್ರಿ ಸ್ಟಾರ್ಟಪ್ ವೃದ್ಧಿಗೆ ಸರ್ಕಾರದ ಜೊತೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡಲು ಬದ್ಧನಾಗಿರುವುದಾಗಿ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.
ಕೃಷಿ ನವೋದ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಎಫ್.ಐ.ಸಿ.ಸಿ.ಐ ಪ್ರಧಾನ ಕಾರ್ಯದರ್ಶಿ ದಿಲೀಪ್ ಚೆನೋಯ್, ಮುಖ್ಯಸ್ಥ ಪ್ರವೇಶ್ ಶರ್ಮಾ, ರಾಷ್ಟ್ರೀಯ ಕೃಷಿ ಸಮಿತಿ ಮತ್ತು ಸಮೂಹ ಸಂಸ್ಥೆ ಅಧ್ಯಕ್ಷ ಟಿ.ಆರ್.ಕೇಶವನ್, ಅಗ್ರಿ ಸ್ಟಾರ್ಟಪ್ ಕಾರ್ಯಪಡೆ ಮುಖ್ಯಸ್ಥ ರವೀಂದ್ರ ಅಗರ್ವಾಲ್ ಸೇರಿದಂತೆ ಮತ್ತಿತ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ: ತೊಡಿಕಾನ: ಅಳಿವಿನಂಚಿನಲ್ಲಿರುವ ಮಹಷೀರ್ ಜಾತಿಯ ಮೀನುಗಳಿಗೆ ಬೇಕು ಶಾಶ್ವತ ಸಂರಕ್ಷಣೆ ಯೋಜನೆ