Advertisement

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

11:50 PM Jan 01, 2025 | Team Udayavani |

ಬೆಂಗಳೂರು: ರಾಜ್ಯ ಸರಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಉಚಿತ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್‌ಎಸ್‌)ಅನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಮನವಿ ಸಲ್ಲಿಸಿದರು.

Advertisement

ಇದಕ್ಕೆ ಜ.15ರಂದು ಆರ್ಥಿಕ ಇಲಾಖೆ, ಸಿಬಂದಿ ಮತ್ತು ಆಡಳಿತ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿ ಯೋಜನೆಯ ಬಗ್ಗೆ ಶೀಘ್ರ ಅನುಷ್ಠಾನಗೊಳಿಸುವುದಾಗಿ ಮುಖ್ಯ ಕಾರ್ಯದರ್ಶಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next