Advertisement
ಯೋಜನಾ ಇಲಾಖೆಯ ಕರ್ನಾಟಕ ಆರ್ಥಿಕ ಸಮೀಕ್ಷೆ 2021-22 ರ ಆಧಾರದ ಮೇಲೆ ಹೆಚ್ಚಿನ ವಿಶ್ಲೇಷಣೆಯೊಂದಿಗೆ ಮೋಹನ್ ದಾಸ್ ಪೈ ಮತ್ತು ನಿಶಾ ಹೊಳ್ಳ ಅವರು ರಚಿಸಿರುವ “Karnataka: A $1 Trillion GDP Vision” ಎಂಬ ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.
Related Articles
Advertisement
ಮೂಲಸೌಕರ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಮೂಲಸೌಕರ್ಯ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಜೊತೆಗೆ ಅಭಿವೃದ್ಧಿಯನ್ನು ಉತ್ತೇಜಿಸಲು ಜನರ ಆರ್ಥಿಕ ಸಾಮರ್ಥ್ಯಗಳನ್ನು ಹೆಚ್ಚಿಸಬೇಕಾಗಿದೆ. ಕೈಗಾರಿಕಾ, ಕೃಷಿ ಮತ್ತು ಸೇವಾ ಕ್ಷೇತ್ರಗಳಲ್ಲಿ ಉದ್ಯೋಗ ಮತ್ತು ಬೆಳವಣಿಗೆಯನ್ನು ಉತ್ತೇಜಿಸಲು ಕೈಗಾರಿಕಾ ವಲಯದ ಸಾಮರ್ಥ್ಯವನ್ನು ಹೆಚ್ಚಿಸುವುದರ ಮೂಲಕ ಕೃಷಿ ಮತ್ತು ಸೇವಾ ವಲಯದ ಬೆಳವಣಿಗೆಯನ್ನು ಕಾಣಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕೈಗಾರಿಕೆ ಮತ್ತು ಖಾಸಗಿ ವಲಯಗಳೆರಡೂ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಸಲಹೆ ಮಾಡಿದರು. ಕ್ರಿಯಾ ಯೋಜನೆಯು ಈ ಎಲ್ಲ ಅಂಶಗಳನ್ನು ಒಳಗೊಂಡಿರಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಕೃತಿಯ ಲೇಖಕರಾದ ಟಿ.ವಿ. ಮೋಹನ್ದಾಸ್ ಪೈ, ನಿಶಾ ಹೊಳ್ಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.