Advertisement

ವಿಧಾನಸಭಾ ಮತದಾನ ಅಂತ್ಯ; ಮತಯಂತ್ರ ಸೇರಿದ ಅಭ್ಯರ್ಥಿಗಳ ಭವಿಷ್ಯ

06:17 PM May 12, 2018 | Sharanya Alva |

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಶನಿವಾರ ಸಂಜೆ 6ಗಂಟೆಗೆ ಮುಕ್ತಾಯವಾಗಿದೆ.  ಸಂಜೆ 5ರವರೆಗೆ ರಾಜ್ಯಾದ್ಯಂತ ಒಟ್ಟು ಶೇ.65ರಷ್ಟು ಮತದಾನವಾಗಿದೆ.

Advertisement

ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆವರೆಗೆ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿತ್ತು. 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ.71ರಷ್ಟು ಮತದಾನವಾಗಿತ್ತು.

ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ಸಣ್ಣ, ಪುಟ್ಟ ಅಹಿತಕರ ಘಟನೆ ಹೊರತುಪಡಿಸಿ ಶಾಂತಿಯುತ ಮತದಾನ ನಡೆದಿದೆ. ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ 15ರಂದು ಫಲಿತಾಂಶ ಹೊರಬೀಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next