Advertisement

ಬಂಡಾಯ ಶಮನ ನಾಯಕರ ಹೊಣೆ

06:00 AM Apr 19, 2018 | |

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಜೋರಾಗಿಯೇ ತಟ್ಟಿದೆ. ಒಟ್ಟು 35 ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಪಕ್ಷದ ವಿರುದ್ಧ ತಿರುಗಿಬಿದ್ದಿದ್ದರೆ, ಬಿ.ಫಾರಂ ನೀಡಿರುವ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾಯಿಸುವಂತೆ ಕೆಲವೆಡೆ ಪಟ್ಟು ಹಿಡಿಯಲಾಗಿದೆ. ಹೀಗಾಗಿ ಹೈಕಮಾಂಡ್‌ ಬಂಡಾಯ ಶಮನದ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯ ಸೇರಿ ಪ್ರಮುಖ ನಾಯಕರಿಗೇ ವಹಿಸಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರೇ ಕೆಲವರ ಜತೆ ಮಾತನಾಡಿದ್ದಾರೆ ಎನ್ನಲಾಗಿದೆ.

Advertisement

ಕೆಲವು ಟಿಕೆಟ್‌ ಆಕಾಂಕ್ಷಿಗಳು ರಾಜ್ಯ ನಾಯಕರು ಹಾಗೂ ಹೈ ಕಮಾಂಡ್‌ ಮೇಲೆ ಪ್ರಭಾವ ಬೀರಿ ಕೊನೇ ಕ್ಷಣದಲ್ಲಿ ಟಿಕೆಟ್‌ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಇನ್ನು ಕೆಲವರು ಪಕ್ಷದ ತೀರ್ಮಾನವನ್ನು ಖಂಡಿಸಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮತ್ತೆ ಹಲವರು ಪಕ್ಷ ತೊರೆದು ಬೇರೆ ಪಕ್ಷದ ಮಡಿಲು ಸೇರಿಕೊಳ್ಳುತ್ತಿದ್ದಾರೆ.

ಹೈಕಮಾಂಡ್‌ಗೆ ತಲೆನೋವು
ಇಷ್ಟೊಂದು ಪ್ರಮಾಣದ ಬಂಡಾಯ ಚುನಾವಣೆ ಫ‌ಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಆತಂಕ ಕಾಂಗ್ರೆಸ್‌ ಹೈ ಕಮಾಂಡ್‌ಗೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ವಂಚಿತ ಅತೃಪ್ತ ಆಕಾಂಕ್ಷಿಗಳನ್ನು ಪ್ರತ್ಯೇಕವಾಗಿ ಮಾತುಕತೆ ನಡೆಸಿ ಬಂಡಾಯ ಶಮನ ಮಾಡಲು ಹೈಕಮಾಂಡ್‌ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್‌ ಸೇರಿ ರಾಜ್ಯ ನಾಯಕರಿಗೆ ಜವಾಬ್ದಾರಿ ವಹಿಸಿದೆ. ಈಗಾಗಲೇ ಬೇರೆ ಪಕ್ಷಕ್ಕೆ ಸೇರಿರುವವರನ್ನು ಮನವೊಲಿಸಿ ವಾಪಸ್‌ ಕರೆತರುವಂತೆಯೂ ನಿರ್ದೇಶನ ನೀಡಲಾಗಿದೆ. ಸ್ವತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕೂಡ ಕೆಲವು ಅತೃಪ್ತರನ್ನು ಸಮಾಧಾನ ಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಯಾರಿಗೆ ಯಾವ ಕ್ಷೇತ್ರದ ಜವಾಬ್ದಾರಿ?

Advertisement

Udayavani is now on Telegram. Click here to join our channel and stay updated with the latest news.

Next