Advertisement

ಏಪ್ರಿಲ್ 10-12 ರ ಮೊದಲು ವಿಧಾನಸಭಾ ಚುನಾವಣೆ ಸಾಧ್ಯತೆ: ಬಿ.ಎಸ್. ಯಡಿಯೂರಪ್ಪ

03:51 PM Feb 04, 2023 | Team Udayavani |

ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್ 10-12 ರ ಮೊದಲು ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಊಹಿಸಿರುವ ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಮತ್ತು ಕೇಂದ್ರದ ಸಾಧನೆಗಳ ಮೇಲೆ ಪಕ್ಷವು ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಸ್ವಂತವಾಗಿ ಅಧಿಕಾರಕ್ಕೆ ಬರಲಿದೆ ಎಂದು ಶನಿವಾರ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಹೇಳಿದ ಬಿಎಸ್ ವೈ, ಮಹಿಳೆಯರು, ಯುವಜನರ ಬೆಂಬಲ ಪಡೆಯುವತ್ತ ವಿಶೇಷ ಗಮನಹರಿಸುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಮನೆ-ಮನೆಗೆ ಕೊಂಡೊಯ್ಯಲು ಕಾರ್ಯಕರ್ತರು ಮತ್ತು ಮುಖಂಡರು ಕೆಲಸ ಮಾಡಬೇಕು ಎಂದರು.

ಹಣ, ಬಲ ಮತ್ತು ಕೋಮು ರಾಜಕಾರಣವನ್ನು ಬಳಸಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನಗಳು ಕಳೆದು ಹೋಗಿವೆ ಎಂದರು.

ಇದನ್ನೂ ಓದಿ:ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಬೀರ‍್ನಹಿತ್ಲು ಶಾಲೆಯಲ್ಲಿ ವಿವಾದ ಸೃಷ್ಠಿಸಿದ ಪ್ರವಾಸ

“ಏಪ್ರಿಲ್ 10-12 ರ ಮೊದಲು ವಿಧಾನಸಭಾ ಚುನಾವಣೆಯನ್ನು ನಿರೀಕ್ಷಿಸಲಾಗಿದೆ. ಈ ಚುನಾವಣೆಯಲ್ಲಿ 130-140 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ರಚನೆಯನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಯಡಿಯೂರಪ್ಪ ಹೇಳಿದರು.

Advertisement

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಲ್ಲಿ ಕರ್ನಾಟಕ ಸೇರಿದಂತೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುವುದರಲ್ಲಿ ಸಂದೇಹವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next