Advertisement

ಜ.20ರಂದು ಕರ್ನಾಟಕಕ್ಕೆ ರಾಹುಲ್‌?

06:00 AM Dec 30, 2017 | Team Udayavani |

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜನವರಿ 20ರಿಂದ ಮೂರು ದಿನ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದ್ದು, ಜನವರಿ 20 ರಂದು ಬೆಳಗಾವಿಯಲ್ಲಿ ಮಹಿಳಾ ಜನ ಪ್ರತಿನಿಧಿಗಳು ಹಾಗೂ ಮಹಿಳಾ ಪದಾಧಿಕಾರಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಜನವರಿ 21 ರಂದು ಬಳ್ಳಾರಿಯಲ್ಲಿ ಎಸ್ಟಿ ಸಮುದಾಯದ ಸಮಾವೇಶ ಜನವರಿ 22ರಂದು ರೈತರು ಮತ್ತು ವಿದ್ಯಾರ್ಥಿಗಳೊಂದಿಗೆ ರಾಹುಲ್‌ ಗಾಂಧಿ ಸಂವಾದ ನಡೆಸುವ ಸಾಧ್ಯತೆ ಇದೆ.

Advertisement

ಅಧ್ಯಕ್ಷರಾಗಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ರಾಜ್ಯ ನಾಯಕರು ಭರದ ಸಿದ್ಧತೆ  ಮಾಡಿಕೊಳ್ಳುತ್ತಿದ್ದಾರೆ. ಅಧ್ಯಕ್ಷರಾದ ಮೊದಲ ಭೇಟಿ ಮೂಲಕವೇ ರಾಹುಲ್‌ ಗಾಂಧಿ ಚುನಾವಣೆಗೆ ರಣಕಹಳೆ ಊದುವ ಸಾಧ್ಯತೆ ಇದೆ. ಈ ಹಿಂದೆ ನವೆಂಬರ್‌ 19 ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ಶತಮಾನೋತ್ಸವ ಹಾಗೂ ಮೀನುಗಾರರ ಸಮಾವೇಶಕ್ಕೆ ಆಗಮಿಸಲು ರಾಹುಲ್‌ ಒಪ್ಪಿಕೊಂಡಿದ್ದರು. ಆದರೆ, ಗುಜರಾತ್‌ ಚುನಾವಣೆ ಮತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೇರುವುದು ಖಚಿತವಾಗಿದ್ದರಿಂದ ಎರಡೂ ಕಾರ್ಯಕ್ರಮಗಳಿಗೆ ಆಗಮಿಸಿರಲಿಲ್ಲ.

ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಭೇಟಿಯನ್ನು ಕರ್ನಾಟಕಕ್ಕೆ ನೀಡಬೇಕೆಂದು ರಾಜ್ಯ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿಗೆ ಮನವಿ ಮಾಡಿಕೊಂಡಿದ್ದರು. ಅದರಂತೆ ಜನವರಿ 20 ರಿಂದ ಮೂರು ದಿನ ರಾಹುಲ್‌ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next