Advertisement

Karnataka ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

06:01 PM Mar 11, 2023 | Team Udayavani |

ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ.

Advertisement

ಇದನ್ನೂ ಓದಿ:ಎರಡನೇ ಟೆಸ್ಟ್ ಶತಕ ಸಿಡಿಸಿದ ಗಿಲ್ ;ಮೊದಲ ಇನಿಂಗ್ಸ್‌ನಲ್ಲಿ 191 ರನ್‌ಗಳಿಂದ ಹಿನ್ನಡೆ

ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಮಾಹಿತಿ ನೀಡಿದ್ದಾರೆ.

ಆಯೋಗದ ತ್ರಿಸದಸ್ಯ ಸಮಿತಿಯು ಗುರುವಾರದಿಂದ ಮೂರು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಿ ಚುನಾವಣಾ ಸಿದ್ದತೆಗಳನ್ನು ಪರಿಶೀಲಿಸಿತು. 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ 24ರಂದು ಕೊನೆಗೊಳ್ಳಲಿದೆ.

ರಾಜ್ಯದಲ್ಲಿ ಒಟಟು 58,282 ಮತಗಟ್ಟೆ ಸ್ಥಾಪಿಸಲಾಗುವುದು. ಒಂದು ಮತಗಟ್ಟೆಯಲ್ಲಿ 883 ಜನರು ಮತ ಚಲಾಯಿಸಬಹುದು. ನಗರ ಪ್ರದೇಶದಲ್ಲಿ 24,063 ಮತಗಟ್ಟೆ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಮೇ 24ಕ್ಕೂ ಮೊದಲು ಚುನಾವಣೆ ನಡೆಸಬೇಕಾಗಿದೆ. ವಿಶೇಷ ಚೇತನರಿಗೆ ವ್ಹೀಲ್ ಚೇರ್ ಸೇರಿದಂತೆ ಮನೆಯಲ್ಲಿಯೇ ಮತದಾನ ಮಾಡಲು ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಆಯೋಗ ತಿಳಿಸಿದೆ.

Advertisement

ಯಾವುದೇ ಕಾರಣಕ್ಕೂ ಇವಿಎಂಗಳನ್ನು ಬದಲಾಯಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಕಾಂಗ್ರೆಸ್ ಪಕ್ಷದ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಎಲ್ಲೆಡೆ ಬಳಸಿದ ಇವಿಎಂಗಳನ್ನೇ ಕರ್ನಾಟಕ ಚುನಾವಣೆಗೆ ಬಳಸಲಾಗುವುದು. ಈ ಹಿಂದೆಯೂ ಇವಿಎಂಗಳ ಬಗ್ಗೆ ಆರೋಪ ಕೇಳಿ ಬಂದಿತ್ತು ಎಂದು ಆಯೋಗ ಹೇಳಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 104 ಸ್ಥಾನಗಳಲ್ಲಿ ಜಯಗಳಿಸಿತ್ತು. ಕಾಂಗ್ರೆಸ್ ಪಕ್ಷ 78 ಹಾಗೂ ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next