Advertisement

Karnataka Assembly ರಾಹುಲ್‌ ದ್ರಾವಿಡ್‌ ಅಭಿನಂದನೆಗೆ ನಿರ್ಣಯ

12:13 AM Jul 16, 2024 | Team Udayavani |

ಬೆಂಗಳೂರು: ಟಿ 20 ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌, ಕರ್ನಾಟಕದ ರಾಹುಲ್‌ ದ್ರಾವಿಡ್‌ ಅವರಿಗೆ ಅಭಿನಂದಿಸುವ ನಿರ್ಣಯವನ್ನು ವಿಧಾನಸಭೆ ತೆಗೆದುಕೊಳ್ಳಬೇಕೆಂದು ಬಿಜೆಪಿ ಶಾಸಕ ಎಸ್‌. ಸುರೇಶ್‌ ಕುಮಾರ್‌ ಆಗ್ರಹಿಸಿದ್ದಾರೆ.

Advertisement

“ವಿಶ್ವಕಪ್‌ ಗೆದ್ದ ಭಾರತಕ್ಕೆ ವಿಶ್ವ ಮಾನ್ಯತೆ ಸಿಕ್ಕಿದೆ. ದೇಶದ ಗೌರವ ಹೆಚ್ಚಿದೆ. ಈ ಸಾಧನೆಯ ಹಿಂದೆ ರಾಹುಲ್‌ ದ್ರಾವಿಡ್‌ ಅವರ ತರಬೇತಿ ಹಾಗೂ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ. ಹೀಗಾಗಿ ಈ ಸದನ ಒಕ್ಕೊರಲಿನಿಂದ ಅವರನ್ನು ಅಭಿನಂದಿಸುವ ನಿರ್ಣಯ ತೆಗೆದುಕೊಳ್ಳಬೇಕು. ಅದು ನಮ್ಮ ಕರ್ತವ್ಯವೂ ಹೌದು’ ಎಂದು ಸುರೇಶ್‌ ಕುಮಾರ್‌ ಹೇಳಿದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಸ್ಪೀಕರ್‌ ಯು.ಟಿ. ಖಾದರ್‌, “ಈ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ದ್ರಾವಿಡ್‌ ಅವರನ್ನು ಅಭಿನಂದಿಸುವ ನಿರ್ಣಯವನ್ನು ತತ್‌ಕ್ಷಣ ಮಂಡಿಸುವುದಕ್ಕೆ ಸೂಚನೆ ನೀಡಲಾಗುವುದು’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next