Advertisement

ಕೆಪಿಎಸ್‌ಸಿ ಮಸೂದೆ ಅಂಗೀಕಾರ

11:21 PM Feb 21, 2022 | Team Udayavani |

ಬೆಂಗಳೂರು: 2011ರ 362 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯನ್ನು ಸಕ್ರಮಗೊಳಿಸಲೆಂದು ರಾಜ್ಯ ಸರಕಾರ ಕರ್ನಾಟಕ ಸಿವಿಲ್‌ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರರ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಮಸೂದೆ 2022ಕ್ಕೆ ಸದನದಲ್ಲಿ ಅಂಗೀಕಾರಗೊಂಡಿತು.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕಾಂಗ್ರೆಸ್‌ ಸದಸ್ಯರ ಗದ್ದಲದ ನಡುವೆಯೇ ಮಸೂದೆಯನ್ನು ಮಂಡಿಸಿದರು.

ಮಸೂದೆಯನ್ನು ಜೆಡಿಎಸ್‌ನ ಬಂಡೆಪ್ಪ ಕಾಶೆಂಪೂರ್‌ ಸ್ವಾಗತಿಸಿದರು. ಬಳಿಕ ಧ್ವನಿಮತದ ಮೂಲಕ ಅಂಗೀಕಾರ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next