Advertisement

13ಕ್ಕೆ ಕರ್ನಾಟಕ ಬಂದ್‌ಗೆ ಕರೆ?

01:39 PM Feb 09, 2020 | Suhan S |

ಬೆಂಗಳೂರು: “ಕನ್ನಡಿಗರಿಗಾಗಿ ಉದ್ಯೋಗ’ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ.13ರಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ರಾಜ್ಯಾದ್ಯಂತ ಬಂದ್‌ಗೆ ಕರೆಕೊಟ್ಟಿದೆ. ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಸಂಘಟನೆಗಳ

Advertisement

ಒಕ್ಕೂಟದ ಮುಖಂಡ ನಾಗೇಶ್‌, ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕಳೆದ 97 ದಿನಗಳಿಂದ ನಗರದ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಶಾಸಕರು, ಸಚಿವರು ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ವರದಿ ಜಾರಿಗೆ ಯಾವುದೇ ಪ್ರಯತ್ನವನ್ನು ಮಾಡುತ್ತಿಲ್ಲ. ಹೀಗಾಗಿ, ಫೆ.13ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ. ಈಗಾಗಲೇ ಬಂದ್‌ಗೆ ಜಯ ಕರ್ನಾಟಕ. ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ), ದಲಿತ ಸಂಘಟನೆಗಳ ಒಕ್ಕೂಟ (ರಂಗಸ್ವಾಮಿ ಬಣ), ಅಂಬೇಡ್ಕರ್‌ಸೇನೆ, ಚಾಲಕರ ಸಂಘಟನೆ ಒಕ್ಕೂಟ, ಆಟೋ ಯೂನಿಯನ್‌ ಸಂಘಟನೆಗಳು, ಲಾರಿ ಮಾಲೀಕರ ಸಂಘ, ಸಿಐಟಿಯು ಕಾರ್ಮಿಕ ಸಂಘಟನೆಗಳು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌, ಚಲನಚಿತ್ರ ವಾಣಿಜ್ಯ ಮಂಡಳಿ, ದಲಿತ ನಾಯಕ ಮಾವಳ್ಳಿ ಶಂಕರ್‌, ಎಸ್‌ಡಿಪಿಐ,ಅಂಬೇಡ್ಕರ್‌ ದಲಿತ ಸೇನೆ ಸೇರಿ 400ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮೂವತ್ತಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಫೆ.13ರಂದು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಬೃಹತ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಹೇಳಿದರು. ಈ ಮಧ್ಯೆ, ಅನಗತ್ಯ ನಷ್ಟ, ಸಾರ್ವಜನಿಕರಿಗೆ ತೊಂದರೆ ಎಂದು ಈ ಬಂದ್‌ಗೆ ಕೆಲ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next