ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನೀಡಲಾದ ಕರ್ನಾಟಕ ಬಂದ್ ಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೋರಾಟ ತೀವ್ರಗೊಂಡಿದೆ.
ಚಿಕ್ಕಮಗಳೂರು ನಗರದ ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು.
ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘ, ಕರವೇ, ಜಯಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಕಾರ್ಯಕರ್ತರು ಉರುಳುಸೇವೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಒಂದು ಕಡೆ ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದೆಡೆ ತಲೆ ಮೇಲೆ ಖಾಲಿ ಕೊಡ ಹೊತ್ತು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Pakistani Tv Show: ಟಿವಿ ಚಾನೆಲ್ ನ ಲೈವ್ ಶೋನಲ್ಲೇ ಪಾಕ್ ಮುಖಂಡರ ಮಾರಾಮಾರಿ!