Advertisement
ಜಿಲ್ಲಾ ಕೇಂದ್ರದಲ್ಲಿ ಬಹುತೇಕ ವ್ಯಾಪಾರ ವಹಿವಾಟು ನಡೆಯುತ್ತಿದೆ ಬೆಳಿಗ್ಗೆ 10 ಗಂಟೆಯ ತನಕ ಬಂದ್ ಪ್ರಭಾವ ಕಂಡು ಬಂದಿತ್ತು. ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಮತ್ತು ಕನ್ನಡಪರ ಸಂಘಟನೆಗಳು ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
Related Articles
Advertisement
ಚಿಕ್ಕಬಳ್ಳಾಪುರ_ಶಿಡ್ಲಘಟ್ಟ ವೃತ್ತದಲ್ಲಿ ರೈತರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ರಾಜ್ಯ ಹೆದ್ದಾರಿ ಮತ್ತು ತಲದುಮ್ಮನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲು ಯತ್ನಿಸಿದ ರೈತ ಮುಖಂಡರನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಮುಂಜಾಗ್ರತೆಯಿಂದ ಬಂಧಿಸಿದ್ದಾರೆ.
ಬಂಧಿಸಿರುವ ರೈತರನ್ನು ಕೂಡಲೇ ಬಿಡುಗಡೆ ಮಾಡಲು ಆಗ್ರಹಿಸಿ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಬಂದು ಬಂಧಿತ ರೈತರನ್ನು ಬಿಡುಗಡೆ ಮಾಡಿದ್ದಾರೆ.
ಜಿಲ್ಲಾ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು,ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದವು ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ಮಿಥುನ್‌ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.