Advertisement
ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾದರೆ, ಕೆಲವು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ಸೀಮಿತವಾಗಿದ್ದು, ವ್ಯಾಪಾರ ವಹಿವಾಟು, ಜನಸಂಚಾರ ಎಂದಿನಂತಿತ್ತು. ಶನಿವಾರ ಬೆಳಗ್ಗೆಯಿಂದಲೇ ವಿವಿಧ ಕನ್ನಡಪರ ಸಂಘಟನೆಯ ನೂರಾರು ಕಾರ್ಯಕರ್ತರು ರಸ್ತೆಗಿಳಿದು ನಗರದಾದ್ಯಂತ ತಂಡೋಪ ತಂಡವಾಗಿ ಸಂಚರಿಸಿ ಬಂದ್‌ಗೆ ಸಾರ್ವಜನಿಕರು ಬೆಂಬಲ ನೀಡುವಂತೆ ಮನವಿ ಮಾಡಿ ತೆರೆದಿದ್ದ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿಸಿದ ದೃಶ್ಯಗಳು ಕಂಡು ಬಂದವು.
Related Articles
Advertisement
ಮಧ್ಯಾಹ್ನದ ವೇಳೆಗೆ ನಗರದ ಬಹುತೇಕ ಅಂಗಡಿ- ಮುಂಗಟ್ಟುಗಳನ್ನು ತೆರೆದ ಮಾಲೀಕರು ಎಂದಿನಂತೆ ವ್ಯಾಪಾರ- ವಹಿವಾಟು ನಡೆಸಿದರು. ವಾಹನ ಸಂಚಾರ, ಜನಸಂಚಾರ ಎಂದಿನಂತೆ ಮುಂದುವರಿಯಿತು. ಸರ್ಕಾರಿ ಕಚೇರಿ, ಮೆಡಿಕಲ್ ಶಾಪ್, ಆಸ್ಪತ್ರೆ, ಬ್ಯಾಂಕ್ ಸೇರಿದಂತೆಸರ್ಕಾರಿ ಕಚೇರಿಗಳು ಎಂದಿನಂತೆ ತೆರೆದಿದ್ದರೂ ಬಂದ್‌ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ಹೆಚ್ಚಿನ ಸಂಖ್ಯೆಯಜನರು ನಗರದತ್ತ ಮುಖ ಮಾಡದಿದ್ದರಿಂದ ಸರ್ಕಾರಿ ಕಚೇರಿಗಳಲ್ಲಿ ಜನರ ಸಂಖ್ಯೆ ವಿರಳವಾಗಿತ್ತು. ಒಟ್ಟಾರೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆದಿದ್ದ ರಾಜ್ಯ ಬಂದ್‌ಗೆ ಜಿಲ್ಲೆಯಲ್ಲಿ ಭಾಗಶಃ ಬೆಂಬಲ ವ್ಯಕ್ತವಾಯಿತು.
ಪೊಲೀಸ್ ಬಿಗಿ ಬಂದೋಬಸ್ತ್: ಬಂದ್ ಹಿನ್ನೆಲೆಯಲ್ಲಿಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿತ್ತು. ನಗರದ ಹನುಮಂತಪ್ಪ ವೃತ್ತ, ಆಜಾದ್ ಪಾರ್ಕ್ ವೃತ್ತ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಯಿತು.? ಮಧ್ಯಾಹ್ನದ ವೇಳೆಗೆ ಬಹುತೇಕ ಅಂಗಡಿ- ಮುಂಗಟ್ಟುಗಳು ತೆರೆದುಕೊಂಡವು!
ಶನಿವಾರ ಬೆಳಗ್ಗೆಯಿಂದ ನಗರದ ಐಜಿ ರಸ್ತೆ, ಎಂಜಿ ರಸ್ತೆ, ಮಾರ್ಕೆ ಟ್ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿನ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರುಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದ ವರೆಗೂ ಪ್ರತಿಭಟನೆ ಮೆರವಣಿಗೆ ಸಾಗುತ್ತಿದ್ದಂತೆ ಮುಚ್ಚಿದ್ದ ಅಂಗಡಿ- ಮುಂಗಟ್ಟುಗಳು ತೆರೆದುಕೊಂಡವು.