Advertisement

ಕರ್ನಾಟಕ ಬಂದ್ ಗೆ ಬೀದರ್ ನಗರದಲ್ಲಿ ದೊರೆತಿಲ್ಲ ಯಾವುದೇ ಸ್ಪಂದನೆ

03:56 PM Sep 28, 2020 | keerthan |

ಬೀದರ್: ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಕರೆ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ಬೀದರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬಂದ್ ಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ನಗರದ ಗಾಂಧಿ ಗಂಜ್ ಮಾರುಕಟ್ಟೆ ಬಂದ್ ಮಾಡಲಾಗಿದ್ದು, ಇದಕ್ಕೆ ಹೊರತುಪಡಿಸಿ ಎಲ್ಲ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿವೆ. ಅಟೋ, ಬಸ್ ಗಳ ಸಂಚಾರ ಸಾಮಾನ್ಯವಾಗಿದೆ.

ಇದನ್ನೂ ಓದಿ:ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳು, ಸಿಪಿಐ, ಸಿಪಿಎಂ ಸೇರಿ ಕಾರ್ಮಿಕ, ದಲಿತ ಹಾಗೂ ಕನ್ನಡ ಪರ ಸಂಘಟನೆ ಕಾರ್ಯಕರ್ತರು, ರೈತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ್ದು, ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಮೂಲಕ ತೆರಳಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಯಾವುದೇ ಅಹಿತಜರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next