ರಾಮನಗರ: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿಯನ್ನು ವಿರೋಧಿಸಿ ಐಕ್ಯ ಹೋರಾಟ ಸಮಿತಿ ನೀಡಿದ ಕರ್ನಾಟಕ ಬಂದ್ ರಾಮನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿದೆ.
ಜಿಲ್ಲಾ ಕೇಂದ್ರ ರಾಮನಗರದಲ್ಲಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿತ್ತು. ಆದರೆ ರೇಷ್ಮೆಗೂಡು ಮಾರುಕಟ್ಟೆ ಕಾರ್ಯನಿರ್ವಹಿಸಿತು. ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಮುಚ್ಚಿದ್ದವು. ಹೋಟೆಲ್ ಗಳು ತೆರೆದಿದ್ದವು. ಆಟೋರಿಕ್ಷ, ಕೆಎಸ್ಆರ್ ಟಿಸಿ ಬಸ್ ಗಳ ಓಡಾಟ ಇತ್ತು.
ರೈತರು ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಎಪಿಎಂಸಿ ವೃತದ ಬಳಿಯಿಂದ ಐಜೂರು ವೃತ್ತದವರೆಗೆ ಜಾಥ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಕೂಗಿದರು.
ಇದನ್ನೂ ಓದಿ:ಕರ್ನಾಟಕ ಬಂದ್ ಗೆ ಬೀದರ್ ನಗರದಲ್ಲಿ ದೊರೆತಿಲ್ಲ ಯಾವುದೇ ಸ್ಪಂದನೆ
ನಗರದಲ್ಲಿ ಜನರ ಓಡಾಟ ಎಂದಿನಂತೆ ಇತ್ತು. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಮಾಮೂಲಿಯಾಗಿತ್ತು. ಒಟ್ಟಾರೆ ಜಿಲ್ಲಾ ಕೇಂದ್ರದಲ್ಲಿ ಜನಜೀವನಕ್ಕೆ ತೊಂದರೆ ಆಗಲಿಲ್ಲ.
ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ ಕಂಡು ಬಂತು. ಕನಕಪುರ ಮತ್ತು ಚನ್ನಪಟ್ಟಣ ದಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾದವು.
ಜಿಲ್ಲಾದ್ಯಂತ ಪೊಲೀಸರ ಬಂದೋಬಸ್ತ್ ಏರ್ಪಡಿಸಲಾಗಿತ್ತು.