ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಡಿ.5ರಂದು ನಡೆಸಲು ಯೋಜಿಸಿದ್ದ ರಾಜ್ಯ ಬಂದ್ ವಿಚಾರವಾಗಿ ಕನ್ನಡಪರ ಸಂಘಟನೆಗಳ ನಡುವಣ ಗೊಂದಲಗಳು ಅಂತ್ಯಗೊಂಡಿದ್ದು, ರಾಜ್ಯ ಬಂದ್‌ಗೆ ಬೆಂಬಲ ನೀಡಲು ಬಹುತೇಕ ಸಂಘಟನೆಗಳು ಒಪ್ಪಿಗೆ ನೀಡಿವೆ.
ಮರಾಠ ಅಭಿವೃದ್ಧಿ ನಿಗಮ ವಿರೋಧಿಸುವವರು ನಕಲಿ ಹೋರಾಟಗಾರರು ಹಾಗೂ ರೋಲ್ ಕಾಲ್ ಗಿರಾಕಿಗಳು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಕನ್ನಡ ಪರ ಹೋರಾಟಗಾರರನ್ನು ಕೆರಳಿಸಿದೆ. ಈ ನಿಟ್ಟಿನಲ್ಲಿ ಒಗ್ಗಟ್ಟಾಗಿ ಬಂದ್ ನಡೆಸಲು ಸಂಘಟನೆಗಳು ನಿರ್ಧರಿಸಿವೆ.ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದಸಭೆಯಲ್ಲಿ ಬಂದ್‌ಗೆ ಬೆಂಬಲ ನೀಡುವ ಬಗ್ಗೆ ಸಂಘಟನೆಗಳ ಮುಖಂಡರು ಒಮ್ಮತದ ನಿರ್ಧಾರಕ್ಕೆ ಬಂದಿದ್ದಾರೆ. ಸಭೆಯಲ್ಲಿಪಾಲ್ಗೊಂಡಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ,ಪ್ರವೀಣ್ ಶೆಟ್ಟಿ, ಬೆಂಗಳೂರು ವಕೀಲರ ಸಂಘ, ರಾಜ್ ಕುಮಾರ್ ಅಭಿಮಾನಿಗಳ ಸಂಘ ಸೇರಿ ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವಾಟಾಳ್ ನಾಗರಾಜ್, ಬಂದ್‌ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಿವೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಹಂತ ಹಂತವಾಗಿ ನಡೆಸಲಾಗುತ್ತದೆ. ನ.28ರಂದು ಮೈಸೂರಿನಲ್ಲಿ, 30ರಂದು ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿಡಿ.1ರಂದು ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು. ನ.30ರೊಳಗಡೆ ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ನಿಗಮ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ ಮೈಕ್ರೋಮ್ಯಾಕ್ಸ್: ನೋಟ್-1 Sold Out, 1B ಇಂದು ಬಿಡುಗಡೆ
ಡಿ.5ರಂದು ಬಂದ್‌ಗೆ 5 ಲಕ್ಷ ಜನರನ್ನು ಸೇರಿಸಲಾಗುತ್ತದೆ. ಪುರಭವನದಿಂದ ಬೃಹತ್ ಮೆರವಣಿಗೆ ಮೂಲಕ ಫ್ರೀಡಂಪಾರ್ಕ್‌ಗೆ ತೆರಳಿ ನಿಗಮ ವಾಪಸ್ ಪಡೆಯುವಂತೆ ಹೋರಾಟ ಮಾಡಲಾಗುತ್ತದೆ ಎಂದರು. ಸಾ.ರಾ.ಗೋವಿಂದು ಮಾತನಾಡಿ, ಕನ್ನಡ ಪರಹೋರಾಟಗಾರರು ಸ್ವಾರ್ಥಕ್ಕಾಗಿ ಹೋರಾಟ ಮಾಡುತ್ತಿಲ್ಲ.ಹೋರಾಟಗಾರರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.
ಕರವೇ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಮರಾಠ ಅಭಿವೃದ್ಧಿ ನಿಗಮ ಸೇರಿ ಕನ್ನಡ ವಿರೋಧಿ ಧೋರಣೆ ಖಂಡಿಸಿ ಡಿ.5ರಂದು ಕರೆ ನೀಡಿರುವ ಬಂದ್‌ಗೆ ತಾತ್ವಿಕ ಬೆಂಬಲ ನೀಡಲು ಕರವೇ (ನಾರಾಯಣಗೌಡ ಬಣ) ನಿರ್ಧರಿಸಿದೆ ಎಂದು ತಿಳಿಸಿದರು ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರು, ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.