ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಳಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ ಸಲಹೆಗಳನ್ನು ಪಡೆದಿಲ್ಲ. ಅದೊಂದು ರಾಜಕೀಯ ಪ್ರೇರಿತ ಬಂದ್ ಆಗಿದೆ ಎಂದು ದೂರಿದರು.
ಬಂದನ್ನು ಕೇವಲ ಬೆಂಗಳೂರಿಗೆ ಸೀಮಿತ ಮಾಡಲಾಗಿದೆ. ಬೆಳಗಾವಿ, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ದಕ್ಷಿಣ ಕರ್ನಾಟಕ, ಮಂಗಳೂರು ಪ್ರದೇಶಗಳನ್ನು ಕಾವೇರಿ ಬಂದ್ ನಿಂದ ದೂರಿ ಇರಿಸಿರುವುದು ಸರಿಯಲ್ಲ. ಆ ಹಿನ್ನೆಲೆಯಲ್ಲಿ ಅಖಂಡ ಕರ್ನಾಟಕ್ಕೆ ಕರೆ ನೀಡಲಾಗಿದೆ ಎಂದರು.
ಇದನ್ನೂ ಓದಿ:Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್
ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿ ಕನ್ನಡಪರ ಸಂಘಟನೆಗಳು ಬಂದ್ ಬೆಂಬಲ ನೀಡಿವೆ. ದೆಹಲಿವರೆಗೂ ನಮ್ಮ ಹೋರಾಟದ ಬಿಸಿ ಮುಟ್ಟಲಿದೆ ಎಂದು ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯುವುದನ್ನು ವಿರೋಧಿಸಿ ನಾಳೆ ರಾಜಭವನ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.