ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ಹಲವು ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ರೈಲು ತಡೆಗೆ ಮುಂದಾದ ನಾರಾಯಣ ಗೌಡ ಮತ್ತು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಹಲವೆಡೆ ಪ್ರತಿಭಟನೆಗಳು, ರಸ್ತೆ ತಡೆ, ಮುಂತಾದ ರೀತಿಯ ಪ್ರತಿಭಟನೆಗಳು ನಡೆಯುತ್ತಿದೆ. ಇತರ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ.
ಇದನ್ನೂ ಓದಿ: ಕರ್ನಾಟಕ ಬಂದ್: ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ
Related Articles
ಹುಬ್ಬಳ್ಳಿ: ಹೊಸೂರು ವೃತ್ತದಲ್ಲಿ ಕರವೇ, ರೈತ ಸಂಘಟನೆ ಮತ್ತು ಆಪ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ಬಂದ್ ಗೆ ಕರಾವಳಿ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್ ಸಂಚಾರ, ಆಟೋ ಸಂಚಾರ ಎಂದಿನಂತಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ.
ಇದನ್ನೂ ಓದಿ:ಕರ್ನಾಟಕ ಬಂದ್:ಬಳ್ಳಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ, APMC ಮಾರ್ಕೆಟ್ ಎಂದಿನಂತೆ
ಏನಿದು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ?
* ಜಮೀನು ಖರೀದಿಸಲು ಕೃಷಿಯೇತರ ಆದಾಯ 25 ಲಕ್ಷ ರೂ. ಮೀರಿರಬಾರದು ಎಂಬ ಮಿತಿ ರದ್ದು.
* ವ್ಯಕ್ತಿ ಅಥವಾ ಐದು ಸದಸ್ಯರ ಕುಟುಂಬಕ್ಕೆ 54 ಎಕರೆ ಮತ್ತು ಅದಕ್ಕಿಂತ ಹೆಚ್ಚಿರುವ ಸದಸ್ಯರ ಕುಟುಂಬ ಗರಿಷ್ಠ 108 ಎಕರೆ ಜಮೀನು ಖರೀದಿಸುವ ಅವಕಾಶ ಮುಂದುವರಿಕೆ.
*ಅಧ್ಯಾದೇಶದಲ್ಲಿ ಪ್ರಸ್ತಾವಿಸಲಾಗಿದ್ದ ವ್ಯಕ್ತಿ ಅಥವಾ ಕುಟುಂಬದ ಕನಿಷ್ಠ 108 ಮತ್ತು 216 ಎಕರೆ ಪ್ರಸ್ತಾವ ಕೈಬಿಡಲಾಗಿದೆ.
*ಜಲಾನಯನ ಪ್ರದೇಶದ ವ್ಯಾಪ್ತಿಯ ಜಮೀನು ಖರೀದಿಸಿದರೆ ಕೃಷಿ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಬೇಕು ಎಂಬ ಷರತ್ತಿದೆ.
ಇದನ್ನೂ ಓದಿ:ಕರ್ನಾಟಕ ಬಂದ್: ಉಡುಪಿಯಲ್ಲಿ ಬಸ್ ಸಂಚಾರ ವಿರಳ, ಬಸ್ ಬಂದ್ ಮಾಡಲು ಸಂಘಟನೆಗಳ ಮನವಿ
ಎಪಿಎಂಸಿ ಕಾಯ್ದೆ ತಿದ್ದುಪಡಿ: ಏನಿದೆ?
*ರೈತರು ಎಪಿಎಂಸಿ ಸಹಿತ ಎಲ್ಲಿ ಬೇಕಾದರೂ ತಮ್ಮ ಉತ್ಪನ್ನ ಮಾರಾಟ ಮಾಡಲು ಅವಕಾಶ.
*ಹಿಂದೆ ರೈತರು ಎಪಿಎಂಸಿಯಲ್ಲಿ ಮಾರಾಟ ಮಾಡದಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸುವ ಅಧಿಕಾರವಿತ್ತು. ಈಗ ತೆಗೆದು ಹಾಕಲಾಗಿದೆ.
*ನನ್ನ ಬೆಳೆ ನನ್ನ ಹಕ್ಕು ಎಂದು ರೈತರು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು.