Advertisement

Karnataka Bank: ಅಯೋಧ್ಯೆಯಲ್ಲಿ ಕರ್ಣಾಟಕ ಬ್ಯಾಂಕ್‌ ಶಾಖೆ, ಮಿನಿ ಇ-ಲಾಬಿ

01:30 AM Jan 12, 2024 | Team Udayavani |

ಮಂಗಳೂರು: ಕರ್ಣಾಟಕ ಬ್ಯಾಂಕ್‌ ಅಯೋಧ್ಯೆಯಲ್ಲಿ ಮಿನಿ ಇ-ಲಾಬಿಯೊಂದಿಗೆ ತನ್ನ 915ನೇ ಶಾಖೆಯನ್ನು ಗುರುವಾರ ಆರಂಭಿಸಿದೆ.

Advertisement

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ| ಅನಿಲ್‌ ಮಿಶ್ರಾ ಅವರು ನೂತನ ಶಾಖೆಯನ್ನು ಹಾಗೂ ಗೋಪಾಲ್‌ ನಾಗರಕಟ್ಟೆ ಅವರು ಮಿನಿ ಇ-ಲಾಬಿಯನ್ನು ಉದ್ಘಾಟಿಸಿದರು.
ಬ್ಯಾಂಕಿನ ಎಂಡಿ ಮತ್ತು ಸಿಇಒ ಶ್ರೀಕೃಷ್ಣನ್‌ ಎಚ್‌. ದೀಪ ಬೆಳಗಿಸಿ ಮಾತನಾಡಿ, ಜಾಗತಿಕ ಭೂಪಟದಲ್ಲಿ ವಿರಾಜಮಾನವಾಗಿರುವ ಪವಿತ್ರ ನಗರವಾದ ಅಯೋಧ್ಯೆಗೆ ಕಾಲಿಡಲು ನಾವು ಸಂತೋಷಪಡುತ್ತೇವೆ. ಇದೀಗ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಅಯೋಧ್ಯೆಯು ಸಾಂಸ್ಕೃತಿಕ ಸಂರಕ್ಷಣೆಯ ಪರಿಪೂರ್ಣ ತಾಣವಾಗಿ ಹೊರಹೊಮ್ಮಿದೆ ಹಾಗೂ ಪ್ರಪಂಚದೆಲ್ಲೆಡೆಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. 100 ವರ್ಷಗಳ ವಿಶ್ವಾಸಾರ್ಹ ಹಾಗೂ ಗ್ರಾಹಕಸ್ನೇಹಿ ಪರಂಪರೆಯನ್ನು ಹೊಂದಿರುವ ಕರ್ಣಾಟಕ ಬ್ಯಾಂಕ್‌, ಅಯೋಧ್ಯೆಯ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ಉತ್ಕೃಷ್ಟ ಬ್ಯಾಂಕಿಂಗ್‌ ಸೇವೆಗಳನ್ನು ನೀಡಲಿದೆ ಎಂದರು.

ಕಾರ್ಯಕಾರಿ ನಿರ್ದೇಶಕ ಶೇಖರ ರಾವ್‌ ಮಾತನಾಡಿ, ಭಗವಾನ್‌ ಶ್ರೀರಾಮನ ಪವಿತ್ರ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ನಮ್ಮ ಬ್ಯಾಂಕಿನ ಶಾಖೆಯನ್ನು ಉದ್ಘಾಟಿಸಲು ಸಂತೋಷಪಡುತ್ತೇವೆ. ಇದು ಆರ್ಥಿಕ ಸಮೃದ್ಧಿ ಮತ್ತು ಸಮುದಾಯದ ಅಭಿವೃದ್ಧಿಗೆ ನಮ್ಮ ಬದ್ಧತೆಯನ್ನು ಸಂಕೇತಿಸುತ್ತದೆ. ನಮ್ಮ ಅಯೋಧ್ಯೆ ಶಾಖೆಯು ನವೀನ ಡಿಜಿಟಲ್‌ ಬ್ಯಾಂಕಿಂಗ್‌ ಸೇವೆಗಳನ್ನು ನೀಡಲಿದೆ. ಆ ಮೂಲಕ ಗ್ರಾಹಕರಿಗೆ ತಡೆರಹಿತ ಮತ್ತು ಪರಿಣಾಮಕಾರಿ ಹಣಕಾಸು ಸೇವೆಗಳನ್ನು ಒದಗಿಸುತ್ತದೆ ಎಂದರು.

ಬ್ಯಾಂಕಿನ ನಿರ್ದೇಶಕ ಜಸ್ಟಿಸ್‌ ಎ.ವಿ. ಚಂದ್ರಶೇಖರ್‌, ದಿಲ್ಲಿ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಬಸವರಾಜ ದೇಸಲ್ಲಿ, ಸಾರ್ವಜನಿಕ ಸಂಪರ್ಕಾಧಿಕಾರಿ ಮಾಧವ ವಿ.ಪಿ. ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next