Advertisement

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತ ಕೃಷ್ಣ ಖಾಸಗಿ ಆಸ್ಪತ್ರೆಯಲ್ಲಿ ನಿಧನ

02:13 PM Oct 11, 2020 | keerthan |

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ಅವರು ಅ. 11 ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement

71 ವರ್ಷ ಪ್ರಾಯದ ಅನಂತ ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ರವಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.

1946ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದ ಅನಂತಕೃಷ್ಣ, ಎಸ್.ವಿ.ಎಸ್ ಹೈಸ್ಕೂಲು ಬಂಟ್ವಾಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕಲಿತು ಮೈಸೂರು ವಿವಿಯಿಂದ ಗಣಿತ ಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು.

ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ಮೊಡಂಕಾಪು ದೀಪಿಕಾ ಹೈಸ್ಕೂಲು ಮತ್ತು ಮಣಿಪಾಲದ ಎಂಐಟಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ನಂತರ ಹಿಂದೂಸ್ಥಾನ್ ಎರೊನಾಟಿಕ್ಸ್ ಲಿಮಿಟೆಡ್ (ಎಚ್ ಎಎಲ್) ಸೇರಿದ ಅವರು 1971ರಲ್ಲಿ ಕರ್ಣಾಟಕ ಬ್ಯಾಂಕ್ ಸೇರಿದ್ದರು.

ಬ್ಯಾಂಕ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದ ಅವರು, 1994ರಲ್ಲಿ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿ ಹೊಂದಿದ್ದರು. 1998ರಲ್ಲಿ ಚೀಫ್ ಜನರಲ್ ಮ್ಯಾನೇಜರ್ ಆಗಿ 2000 ಇಸವಿಯಲ್ಲಿ ಸಿಇಒ ಮತ್ತು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Advertisement

ಈ ಭಾಗದಲ್ಲಿ ಅತಿ ಹೆಚ್ಚು ಅವಧಿಗೆ ಬ್ಯಾಂಕೊಂದರ ಮುಖ್ಯಸ್ಥರಾಗಿ ದುಡಿದ ಖ್ಯಾತಿ ಅನಂತಕೃಷ್ಣ ಅವರದ್ದು.

Advertisement

Udayavani is now on Telegram. Click here to join our channel and stay updated with the latest news.

Next