Advertisement

Hookah; ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಕ್ಕೆ ಆದೇಶ

10:46 AM Feb 08, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು. ಸಂಗ್ರಹಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಇಲಾಖೆ ಆಧೀನ ಕಾರ್ಯದರ್ಶಿ ವಿ.ಪದ್ಮಾ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕೆ ಸಂವಿಧಾನದ 47ನೇ ವಿಧಿ ಪ್ರಕಾರ ಈ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

ಹುಕ್ಕಾ ತಂಬಾಕು ಅಥವಾ ನಿಕೋಟಿನ್‌ ಒಳಗೊಂಡ ನಿಕೋಟಿನ್‌ ರಹಿತ ತಂಬಾಕು ರಹಿತ ಸ್ವಾದಭರಿತ, ಸ್ವಾದರಹಿತ ಹುಕ್ಕಾ ಮೊಲಾಸಸ್‌, ಶಿಶಾ ಹಾಗೂ ಇತರೆ ಸೇರಿ ಎಲ್ಲಾ ಮಾದರಿಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆಯನ್ನು ತಕ್ಷಣ ದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಉಲ್ಲಂಘಿಸಿದರೆ ಅವರ ವಿರುದ್ಧ ಕೋಟ್ಟಾ ಕಾಯ್ದೆ-2033 ಮತ್ತು ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆ 2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ)ನಿಯಮ 2015 ಮತ್ತು ಭಾರತೀಯ ದಂಡ ಸಂಹಿತೆ ಮತ್ತು ಅಗ್ನಿ ನಿಯಂತ್ರಣ ಹಾಗೂ ಅಗ್ನಿ ಸುರಕ್ಷತೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ 2016-17 ಅಧ್ಯಯನ ಪ್ರಕಾರ ಕರ್ನಾಟಕದಲ್ಲಿ ಶೇ.22.8 15ಕ್ಕಿಂತ ಹೆಚ್ಚಿನ ವಯಸ್ಸಿನವರು ತಂಬಾಕು ಉತ್ಪನ್ನಗಳ ವ್ಯಸನಿಗಳಾಗಿದ್ದಾರೆ. ಈ ಪೈಕಿ ಶೇ.8.8 ಮಂದಿ ಧೂಮಪಾನಿಗಳಾಗಿದ್ದಾರೆ. ಶೇ.23.9 ವಯಸ್ಕರು ಪರೋಕ್ಷ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ. ಅಲ್ಲದೆ, 45 ನಿಮಿಷಗಳ ಹುಕ್ಕಾ ಸೇನೆ 100 ಸಿಗರೇಟ್‌ ಸೇದುವುದಕ್ಕೆ ಸಮಾನಾಗಿದೆ. ಅದರಲ್ಲಿರುವ ನಿಕೋಟಿನ್‌ ಅಥವಾ ತಂಬಾಕು ಹಾಗೂ ಮೊಲಾಸಸ್‌ರಾಸಾಯನಿಕ ವಸ್ತು ಒಳಗೊಂಡಿದೆ ಎಂದು ವರದಿಯಲ್ಲಿ ಹೇಳಿದೆ. ಅದರಿಂದ ಹರ್ಪಿಸ್‌, ಕ್ಷಯರೋಗ, ಹೈಪಟೈಟಿಸ್‌, ರೋಗ ಹರಡಬಹುದು. ಈ ಹಿನ್ನೆಲೆಯಲ್ಲಿ ನಿಷೇಧವನ್ನು ಆದೇಶದಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next