Advertisement

Karnataka: ಬಿಟ್‌ ಕಾಯಿನ್‌- ಮರುಜೀವ

11:20 PM Jun 27, 2023 | Team Udayavani |

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ಕಾಯಿನ್‌ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಅವರು ವಿಶೇಷ ತನಿಖಾ ತಂಡದ ಮೂಲಕ ಹೆಚ್ಚಿನ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

Advertisement

ಈ ಬೆನ್ನಲ್ಲೇ ಪ್ರಕರಣವನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸಿಐಡಿ ಆರ್ಥಿಕ ಅಪರಾಧ ವಿಭಾಗಕ್ಕೆ ತನಿಖೆ ನಡೆಸುವಂತೆ ಪತ್ರ ಬರೆದು ಸೂಚಿಸಿದ್ದಾರೆ. ಮತ್ತೂಂದೆಡೆ ಸಿಐಡಿ ನೇಮಕಾತಿ ವಿಭಾಗದಲ್ಲಿರುವ ಡಿಜಿಪಿ ಕಮಲ್‌ ಪಂತ್‌, ಸಿಐಡಿ ಬದಲು ಬೇರೆ ಸ್ವತಂತ್ರ ತನಿಖಾ ಸಂಸ್ಥೆ ಮೂಲಕ ತನಿಖೆ ನಡೆಸುವಂತೆ ಡಿಜಿಪಿಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ಸಿಸಿಬಿ ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ ಕೂಡ ಸಲ್ಲಿಸಿದೆ. ಆದರೂ ಪ್ರಕರಣದಲ್ಲಿ ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾರಾದರೂ ಭಾಗಿಯಾಗಿದ್ದಾರಾ? ಎಂಬ ಮಾಹಿತಿ ಪಡೆಯಲು ಹೆಚ್ಚಿನ ತನಿಖೆ ನಡೆಸುವಂತೆ ದಯಾನಂದ್‌ ಬರೆದಿರುವ ಪತ್ರದಲ್ಲಿ ಉಲ್ಲೇಖೀಸಲಾಗಿದೆ.

ಈ ಕುರಿತು ಮಾತನಾಡಿದ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌, ಪ್ರಕರಣದಲ್ಲಿ ಈಗಾಗಲೇ ತನಿಖೆಯಾಗಿ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿರುವುದು ಒಂದು ಹಂತ. ಆದರೆ, ಅದರಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ಸ್‌ ಪಾತ್ರವಿದೆ. ಸರಕಾರದ ಇ-ಸಂಗ್ರಹಣಾ ಪೋರ್ಟಲ್‌ ಸಹ ಹ್ಯಾಕ್‌ ಮಾಡಲಾಗಿದೆ. ಆದ್ದರಿಂದ ವಿಶೇಷ ತನಿಖಾ ತಂಡದ ಮೂಲಕ ಹೆಚ್ಚಿನ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next