Advertisement

4ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ

08:54 AM Jul 27, 2019 | Nagendra Trasi |

ಬೆಂಗಳೂರು:ಕಾಂಗ್ರೆಸ್, ಬಿಜೆಪಿ ಮೈತ್ರಿ ಸರ್ಕಾರ ಪತನವಾದ ಬೆನ್ನಲ್ಲೇ ಶುಕ್ರವಾರ ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Advertisement

ಹಸಿರು ಶಾಲು ಹೊದ್ದು ರಾಜಭವನಕ್ಕೆ ಆಗಮಿಸಿದ್ದ ಯಡಿಯೂರಪ್ಪ. ಸಮಾರಂಭಕ್ಕೆ ಆಗಮಿಸಿದ ಗಣ್ಯರ ಜೊತೆ ಯಡಿಯೂರಪ್ಪ ಈ ಸಂದರ್ಭದಲ್ಲಿ ಕುಶಲೋಪರಿ ನಡೆಸಿದರು.

ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ದೇವರ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಶಾಸಕರು, ಬಿಎಸ್ ವೈ ಪುತ್ರರು, ಪುತ್ರಿಯರು, ಅಳಿಯಂದಿರು ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next