Advertisement

Karnataka BJP; ಎಲ್ಲ ಮರೆತು ಒಟ್ಟಾಗಿ ಹೋಗುತ್ತೇವೆ: ಬಿಎಸ್‌ವೈ

11:16 PM Dec 06, 2024 | Vishnudas Patil |

ಶಿವಮೊಗ್ಗ: ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ಶನಿವಾರ ನಡೆಯಲಿದ್ದು ಅಲ್ಲಿ ಯತ್ನಾಳ್‌ ಬಗ್ಗೆ ಚರ್ಚೆ ಆಗುತ್ತದೆಯೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಆಡಳಿತ ಪಕ್ಷವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ. ಇದಕ್ಕೆ ಯತ್ನಾಳ್‌ ಒಪ್ಪಿಕೊಳ್ಳುತ್ತಾರೆ. ಎಲ್ಲವೂ ಸರಿ ಹೋಗಲಿದೆ ಎಂಬ ಭರವಸೆ ನನಗೆ ಇದೆ. ಎಲ್ಲವನ್ನು ಮರೆತು ಒಟ್ಟಾಗಿ ಹೋಗುವ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.

Advertisement

ನಮ್ಮ ಹೋರಾಟ ಕಾಂಗ್ರೆಸ್‌ ವಿರುದ್ಧವೇ ಹೊರತು ನಾವು ನಾವೇ ಬಡಿದಾಡಿಕೊಳ್ಳುವುದು ಹೆಚ್ಚು ಶಕ್ತಿ ನೀಡುವುದಿಲ್ಲ. ಅ ಧಿವೇಶನವನ್ನು ಯಾವುದೇ ಗೊಂದಲವಿಲ್ಲದೆ ನಾವೆಲ್ಲ ಒಟ್ಟಾಗಿ ಎದುರಿಸುತ್ತೇವೆ ಎಂದರು.

ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ವರಿಷ್ಠರು
ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಯಡಿಯೂರಪ್ಪ ಹೆಸರಿನ ಮೇಲೆ ಎಂಬ ರಮೇಶ್‌ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ಕೇಂದ್ರದ ನಾಯಕರು ಎಂದು ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next