Advertisement

ಶಾಸಕ ಮಾಡಾಳು ವಿರೂಪಾಕ್ಷಪ್ಪ ಜೈಲು ಪಾಲು

09:52 PM Apr 01, 2023 | Team Udayavani |

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಗಮ (ಕೆಎಸ್‌ಎಡಿಎಲ್‌)ದ ಟೆಂಡರ್‌ ನೀಡಲು 40 ಲಕ್ಷ ರೂ. ಲಂಚ ಪಡೆದ ಪ್ರಕರಣದ ಪ್ರಮುಖ ಆರೋಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

ಆರೋಪಿಯನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು ಐದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶನಿವಾರ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್‌ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.

ವಿಚಾರಣೆ ವೇಳೆ ಆರೋಪಿ ಪರ ವಕೀಲರು, ತಮ್ಮ ಕಕ್ಷಿದಾರರಿಗೆ ಮನೆ ಊಟ ಒದಗಿಸಲು ಅವಕಾಶ ಕೊಡುವಂತೆ ಕೋರಿದರು. ಅದಕ್ಕೆ ನಿರಾಕರಿಸಿದ ಕೋರ್ಟ್‌ ಜೈಲಿನ ಪದ್ದತಿಯಂತೆಯೇ ಊಟ ನೀಡಬೇಕು ಎಂದು ಆದೇಶ ನೀಡಿದೆ. ಲಂಚ ಪಡೆದ ಪ್ರಕರಣದಲ್ಲಿ ಆರೋಪಿ ಸಲ್ಲಿಸಿದ್ದ ನೀರಿಕ್ಷಣ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ಮಾ. 27ರಂದು ವಜಾಗೊಳಿಸಿತ್ತು. ಈ ಲೋಕಾಯುಕ್ತ ಪೊಲೀಸರು ಮಾ. 27ರಂದು ರಾತ್ರಿ ತುಮಕೂರಿನ ಕ್ಯಾತ್ಸಂದ ಟೋಲ್‌ ಬಳಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಂಧಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next