Advertisement
ದಿನೇಶ್ ಗುಂಡೂ ರಾವ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ ದಿನೇಶ್ ಗುಂಡೂರಾವ್ ಅವರ ಮನೆಯಲ್ಲೇ ಅರ್ಧ ಪಾಕಿಸ್ಥಾನ ಇದೆ’ ಎಂದು ಹೇಳಿಕೆ ನೀಡಿದ್ದರು. ಯತ್ನಾಳ್ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೂರು ದಾಖಲಿಸಿದ್ದು, ಇದೊಂದು ದೇಶದ್ರೋಹಿ ಹೇಳಿಕೆ ಎಂದು ಪರಿಗಣಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು” ಎಂದು ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಪೋಸ್ಟ್ ಮಾಡಿದ್ದರು. ಭಾರತೀಯತೆ ಪ್ರಶ್ನಿಸುವಂತಿಲ್ಲ
ನಾನು ಮುಸಲ್ಮಾನಳಾಗಿ ಹುಟ್ಟಿರಬಹುದು, ಆದರೆ ನನ್ನ ಭಾರತೀಯತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ತಬು ರಾವ್ ಪ್ರತಿಕ್ರಿಯೆ ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೇ ಎಂದು ಪ್ರಶ್ನಿಸಿ ಮಾಡಿರುವ ಪೋಸ್ಟ್‌ನಲ್ಲಿ ಭಾರತ ಚುನಾವಣ ಆಯೋಗವನ್ನು ಸಹ ಟ್ಯಾಗ್ ಮಾಡಿದ್ದಾರೆ.