Advertisement

Karnataka: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುರಕ್ಷಿತ?

01:26 AM Jan 02, 2025 | Team Udayavani |

ಬೆಂಗಳೂರು: ಧಿಡೀರ್‌ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿದೇಶ ಪ್ರವಾಸ ಮೊಟಕುಗೊಳಿಸಿ ದಿಲ್ಲಿಗೆ ಆಗಮಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರುವ ಹೊಸ್ತಿಲಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ವಿಜಯೇಂದ್ರಗೆ ಶಾ ಅಭಯ ಲಭಿಸಿದೆ ಎನ್ನಲಾಗಿದೆ. ಅವರ ಸ್ಥಾನ ಬಹುತೇಕ ಗಟ್ಟಿ ಎಂದೇ ವಿಶ್ಲೇಷಿಸಲಾಗುತ್ತಿದೆ.

Advertisement

ಮಧ್ಯಾಹ್ನ 2.30ಕ್ಕೆ ದಿಲ್ಲಿಗೆ ಆಗಮಿಸಿರುವ ಅವರು ಸಂಜೆ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕವನ್ನು ಕೊಡುಗೆಯಾಗಿ ನೀಡಿದ್ದಾರೆ. ಇಬ್ಬರ ನಡುವೆ ಅರ್ಧ ಗಂಟೆ ಕಾಲ ಚರ್ಚೆ ನಡೆದಿದ್ದು, ಅಧ್ಯಕ್ಷ ಸ್ಥಾನ ಮುಂದುವರಿಕೆ ವಿಚಾರದಲ್ಲಿ “ಡೋಂಟ್‌ ವರಿ’ ಎಂಬ ಸಂದೇಶವನ್ನು ಶಾ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸರಕಾರದ ವಿರುದ್ಧ ಉಗ್ರ ಹೋರಾಟ?
ಇದರ ಜತೆಗೆ ಶಾಸಕ ಬಸವರಾಜ ಮತ್ತಿಮಡು ಹಾಗೂ ಆಂದೋಲನ ಶ್ರೀಗಳ ಕೊಲೆಗೆ ಸುಪಾರಿ ಪ್ರಕರಣವನ್ನು ವಿಜಯೇಂದ್ರ ಪ್ರಸ್ತಾವಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಸರಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಬಿಜೆಪಿ ಯೋಜನೆ ರೂಪಿಸುವ ಸಾಧ್ಯತೆ ಇದೆ. ಅವರು ಗುರುವಾರ ರಾತ್ರಿ ದಿಲ್ಲಿಯಿಂದ ವಾಪಸ್‌ ಆಗಲಿದ್ದಾರೆ.

ಅಮಿತ್‌ ಶಾ ಆಶೀರ್ವಾದ ಪಡೆದೆ
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್‌ ವಲ್ಲಭ ಭಾç ಪಟೇಲರ ಅನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ 2025ರ ನೂತನ ಕ್ಯಾಲೆಂಡರ್‌ ವರ್ಷದ ಶುಭಾಶಯ ಕೋರಿ ಆಶೀರ್ವಾದ ಪಡೆದೆ. ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್‌ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್‌ ಸರಕಾರದ ಸಚಿವರ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನ ಕೋರಲಾಯಿತು ಎಂದು ಹೇಳಿದ್ದಾರೆ.

ಅಮಿತ್‌ ಶಾ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

Advertisement
Advertisement

Udayavani is now on Telegram. Click here to join our channel and stay updated with the latest news.

Next