Advertisement

ಬಿಎಸ್‌ವೈ ಪ್ರವಾಸಕ್ಕೆ ಸಮ್ಮತಿ

12:01 AM Sep 19, 2021 | Team Udayavani |

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಇದ್ದ ಅಡ್ಡಿಗಳೆಲ್ಲ ನಿವಾರಣೆಯಾಗಿವೆ. ಅವರು ಪಕ್ಷ ಸಂಘಟನೆಗಾಗಿ ರಾಜ್ಯ ಸುತ್ತಿ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುವ ವಿಚಾರಕ್ಕೆ ನಾಯಕರೆಲ್ಲರೂ ಒಕ್ಕೊ ರಲಿನಿಂದ ಸಮ್ಮತಿ ಸೂಚಿಸಿದ್ದಾರೆ.

Advertisement

ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯ ವೇಳೆ ಬಿಎಸ್‌ವೈ ರಾಜ್ಯ ಪ್ರವಾಸಕ್ಕೆ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲ ನಾಯಕರು ಸಮ್ಮತಿ ಸೂಚಿಸಿದ್ದಾರೆ. ಅವರ ಬೆನ್ನಿಗೆ ನಿಂತು ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದ್ದಾರೆ. ನಿಗದಿಯಂತೆ ಅಧಿವೇಶನದ ಬಳಿಕ ಯಡಿಯೂರಪ್ಪ ಅವರ ರಾಜ್ಯ ಪ್ರವಾಸ ಆರಂಭವಾಗಲಿದೆ.

ಬಿಎಸ್‌ವೈ ರಾಜ್ಯ ಪ್ರವಾಸಕ್ಕೆ ನಾವು ಹಸುರು ನಿಶಾನೆ ತೋರುವ ಅಗತ್ಯವೇ ಇಲ್ಲ ಎಂದು ಅರುಣ್‌ ಸಿಂಗ್‌ ಹೇಳಿದರು. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಒಳ್ಳೆಯ ಕೆಲಸ ನಡೆಯುತ್ತಿದೆ. ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಸಮಾಜದ ಎಲ್ಲ ವರ್ಗದ ಅಭಿವೃದ್ಧಿಗೆ ಗಮನ ಹರಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರವಾಸ ಆರಂಭಿಸಿದ್ದೇನೆ: ಬಿಎಸ್‌ವೈ :

ಪಕ್ಷ ಸಂಘಟನೆಗಾಗಿ ನನ್ನ ಪ್ರವಾಸ ಈಗಾಗಲೇ ಪ್ರಾರಂಭವಾಗಿದೆ. ಮೈಸೂರು ಭಾಗಕ್ಕೆ ಹೋಗಿ ಬಂದಿದ್ದೇನೆ. ನಿರಂತರವಾಗಿ ಓಡಾಡುತ್ತಿದ್ದೇನೆ. ನಾನೇ ಅಗಲಿ, ರಾಜ್ಯಾಧ್ಯಕ್ಷರಾಗಲಿ; ರಾಜ್ಯಾ ದ್ಯಂತ ಸಂಚರಿಸಿ ಪಕ್ಷವನ್ನು ಬಲಪಡಿಸುತ್ತೇವೆ. ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿ ಕಾರಕ್ಕೆ ತರಲು ಇಂದಿನಿಂದಲೇ ಕೆಲಸ ಆರಂಭಿ ಸುತ್ತೇವೆ. ರಾಜ್ಯದಲ್ಲಿ  ಸಂಚರಿಸಿ 130-140 ಸ್ಥಾನ ಗೆದ್ದು ಅಧಿಕಾರಕ್ಕೆ ಮತ್ತೆ ಬರುತ್ತೇವೆ ಎಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಕಟೀಲು, ಬೊಮ್ಮಾಯಿ ನೇತೃತ್ವ :

ಬಿಎಸ್‌ವೈ ಪ್ರವಾಸಕ್ಕೆ ಎಲ್ಲ ನಾಯಕರು ಸಮ್ಮತಿ ಸೂಚಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ, ಕೇಂದ್ರದ ನಾಯಕರು ಸ್ಪಷ್ಟವಾಗಿ ಹೇಳಿರುವಂತೆ ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ನೇತೃತ್ವ ದಲ್ಲೇ ಮುಂದಿನ ವಿಧಾನಸಭಾ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

ಬಿಎಸ್‌ವೈ ಅವರನ್ನು ಬದಿಗೆ ಸರಿಸುವ ಪ್ರಶ್ನೆಯೇ ಇಲ್ಲ. ಅವರ ಮಾರ್ಗ ದರ್ಶನದಲ್ಲಿಯೇ ಎಲ್ಲವೂ ನಡೆಯು ತ್ತಿದೆ. ರಾಜ್ಯ ಪ್ರವಾಸಕ್ಕೆ ಯಾವುದೇ ಅಡ್ಡಿ ಇಲ್ಲ. ನಳಿನ್‌ಕುಮಾರ್‌ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ

ಯಡಿಯೂರಪ್ಪ ಅವರಿಗೆ ಅಧಿಕಾರ ಇರಲಿ, ಇಲ್ಲದಿರಲಿ; ರಾಜ್ಯಾದ್ಯಂತ  ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುತ್ತಾರೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ.ಬಿ.ವೈ. ವಿಜಯೇಂದ್ರ,  ಬಿಜೆಪಿ ರಾಜ್ಯ ಉಪಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next