Advertisement

ಗಡಿ ವಿವಾದ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಶಿಂಧೆ

01:31 PM Dec 27, 2022 | Team Udayavani |

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯದೊಂದಿಗೆ ಗಡಿ ವಿವಾದದ ನಿರ್ಣಯವನ್ನು ಮಂಡಿಸಿದರು.

Advertisement

ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ಭಾಲ್ಕಿ ಸೇರಿದಂತೆ 865 ಗ್ರಾಮಗಳ ಪ್ರತಿ ಇಂಚು ಸೇರ್ಪಡೆಗಾಗಿ ಮಹಾರಾಷ್ಟ್ರವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಪ್ರಕರಣವನ್ನು ಸಂಪೂರ್ಣ ಶಕ್ತಿಯೊಂದಿಗೆ ಹೋರಾಡಲಿದೆ ಎಂಬ ನಿರ್ಣಯವನ್ನು ರಾಜ್ಯ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿತು.

ಗಡಿ ಪ್ರದೇಶದಲ್ಲಿ ಮರಾಠಿ ವಿರೋಧಿ ನಿಲುವು ಅನುಸರಿಸುತ್ತಿರುವ ಕರ್ನಾಟಕ ಆಡಳಿತವನ್ನು ನಿರ್ಣಯ ಖಂಡಿಸಿದೆ.

ಬೆಳಗಾವಿ, ನಿಪ್ಪಾಣಿ, ಕಾರವಾರ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಹೇಳಿ ಸೋಮವಾರ ಮಾಜಿ ಸಿಎಂ ಉದ್ಧವ್ ಠಾಕ್ರೆ ಸುರಿಯುವ ಬೆಂಕಿಗೆ ತುಪ್ಪ ಸುರಿದಿದ್ದರು.

ಇದನ್ನೂ ಓದಿ:ಜನಾರ್ಧನ ರೆಡ್ಡಿ ಹೊಸ ಪಕ್ಕಕ್ಕೆ ಉಜ್ವಲ ಭವಿಷ್ಯವಿದೆ: ಅಂಜನಾದ್ರಿ ಅರ್ಚಕ ‌

Advertisement

ಮಂಗಳವಾರ ಬೆಳಗ್ಗೆ ಮಾತನಾಡಿದ್ದ ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವೀಸ್, ಇಂದು ಮುಖ್ಯಮಂತ್ರಿಯವರು ಗಡಿ ವಿವಾದದ ಕುರಿತು ನಿರ್ಣಯವನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ನಿನ್ನೆ ಮಾತನಾಡಿದವರು ಮುಖ್ಯಮಂತ್ರಿಯಾಗಿ 2.5 ವರ್ಷ ಏನೂ ಮಾಡಿಲ್ಲ ಎಂದು ನನಗೆ ಆಶ್ಚರ್ಯವಾಗಿದೆ’ ಎಂದಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಗಡಿ ಸಮಸ್ಯೆ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ಎರಡೂ ರಾಜ್ಯಗಳು ಶಾಂತಿಯಿಂದ ಇರಬೇಕು. ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದರು. ಆದರೆ ಮಹಾರಾಷ್ಟ್ರ ರಾಜಕಾರಣಿಗಳು ಮಾತ್ರ ಹೇಳಿಕೆ ನೀಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next