ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಫೆ.17) ಮಂಡಿಸಿದ್ದು, ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಯೋಜನೆಗಳನ್ನು ಘೋಷಿಸಲಾಗಿದೆ.
ಇದನ್ನೂ ಓದಿ:Karnataka Budget 2023:ಮೀನುಗಾರಿಕೆ ಉತ್ತೇಜನಕ್ಕೆ ಕಾರವಾರದಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆ
ಬೃಹತ್ ನಗರವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿಯಲ್ಲಿನ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು. ವೈಜ್ಞಾನಿಕ ಹಾಗೂ ತ್ಯಾಜ್ಯ ನಿರ್ವಹಣೆ ವ್ಯವಸ್ಥೆ ರೂಪಿಸಲು ಆದ್ಯತೆ ನೀಡಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ರೂ.ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಳೆ ನೀರು ಮುಕ್ತವಾಗಿ ಹರಿಯಲು ಮತ್ತು ಪ್ರವಾಹ ತಪ್ಪಿಸಲು ಒಟ್ಟು 195 ಕಿಲೋ ಮೀಟರ್ ಉದ್ದದ ಚರಂಡಿ ಮತ್ತು ರಿವಿಟ್ ಅಭಿವೃದ್ಧಿಗಾಗಿ 1,813 ಕೋಟಿ ರೂ. ನೀಡಲಾಗುವುದು. ಅಲ್ಲದೇ ಅಧಿಕ ಜನಸಂಖ್ಯೆ ಯೋಜನೆಯಡಿ ಒಟ್ಟು 108 ಕಿಲೋ ಮೀಟರ್ ರಸ್ತೆಗಳನ್ನು 273 ಕೋಟಿ ರೂ.ಗಳ ಅಂದಾಜಿನಲ್ಲಿ ನಿರ್ಮಿಸಲಾಗುವುದು ಎಂದು ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ.
Related Articles
75 ಜಂಕ್ಷನ್ ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ:
ಬೆಂಗಳೂರು ನಗರದ ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡಲು ಪ್ರಮುಖ 75 ಜಂಕ್ಷನ್ ಗಳನ್ನು 150 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. AI ತಂತ್ರಜ್ಞಾನ ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್ ಗಳ ನಿರ್ವಹಣೆ ಮಾಡಲು Seamless Signalling ಅಳವಡಿಸಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಉದ್ದೇಶಿಸಲಾಗಿದೆ.
ಬೆಂಗಳೂರಿನ 23 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್:
ರಾಜಧಾನಿಯಲ್ಲಿ ಸುಲಭ ದರದಲ್ಲಿ ಆರೋಗ್ಯ ಸೇವೆ ಲಭ್ಯವಾಗುವ ನಿಟ್ಟಿನಲ್ಲಿ 243 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್ ತೆರೆಯಲು ಅನುಮೋದನೆ ನೀಡಲಾಗಿದೆ. ಹೆಚ್ಚುವರಿಯಾಗಿ 50 ಡಯಾಲಿಸಿದ್ ಹಾಸಿಗೆಗಳು, 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯ ಒದಗಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.