Advertisement

ಕರ್ನಾಟಕ ಬಜೆಟ್ 2021: ಮಹಿಳೆಯರಿಗೆ ಬಂಪರ್ ಯೋಜನೆ ಘೋಷಣೆ, ಶೇ.4ರ ಬಡ್ಡಿದರದಲ್ಲಿ 2 ಕೋಟಿ ಸಾಲ

01:58 PM Mar 08, 2021 | Team Udayavani |

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು(ಮಾರ್ಚ್ 08, 2021) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸಿರುವ 2021-22ನೇ ಸಾಲಿನ ಬಜೆಟ್ ನಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.

Advertisement

ಇದನ್ನೂ ಓದಿ: ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ, ಜಾತಿವಾರು ನಿಗಮ, ಮಠಗಳಿಗೆ ವಿಶೇಷ ಅನುದಾನ

ಮಹಿಳೆಯರಿಗೆ ಬಜೆಟ್ ನಲ್ಲಿ ಬಂಪರ್ ಯೋಜನೆ:

*ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ

*ಹಪ್ಪಳ, ಉಪ್ಪನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ಒದಗಿಸಲು ಕ್ರಮ, ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿದರದಲ್ಲಿ 2 ಕೋಟಿ ರೂ.ವರೆಗೆ ಸಾಲ.

Advertisement

* ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ “ವನಿತಾ ಸಂಗಾತಿ” ಹೆಸರಿನಲ್ಲಿ ರಿಯಾಯ್ತಿ ದರದ ಬಸ್ ಪಾಸ್.

*ನಿರ್ಭಯಾ ಯೋಜನೆಯಡಿ ಪೊಲೀಸ್ ಠಾಣೆಗಳಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ, ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ.

*2021-22ನೇ ಸಾಲಿನ ಬಜೆಟ್ ಲ್ಲಿ ಮಹಿಳೆಯರಿಗೆ ಸಂಬಂಧಪಟ್ಟ ಯೋಜನೆಗಳ ಅನುಷ್ಠಾನಕ್ಕಾಗಿ 37,188 ಕೋಟಿ ರೂಪಾಯಿ ಅನುದಾನ.

*ಮಹಿಳಾ ಸರ್ಕಾರಿ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆ 6 ತಿಂಗಳು ಜೊತೆಗೆ ಸೇವಾವಧಿಯಲ್ಲಿ 6 ತಿಂಗಳು ಮಕ್ಕಳ ಆರೈಕೆ ರಜೆ.

Advertisement

Udayavani is now on Telegram. Click here to join our channel and stay updated with the latest news.

Next