Advertisement

ಕರ್ನಾಟಕ ಬಜೆಟ್ 2021: ಉದ್ಯಾನ ನಗರಿ ಸಮಗ್ರ ಅಭಿವೃದ್ಧಿಗೆ ಬಂಪರ್ ಕೊಡುಗೆ

05:38 PM Mar 08, 2021 | Team Udayavani |

ಮಣಿಪಾಲ: ಬೆಂಗಳೂರಿನ ಮಲ್ಲೇಶ್ವರದಲ್ಲಿ ಮೈಸೂರು ಲ್ಯಾಂಪ್ಸ್ ವರ್ಕ್ಸ್ ನಿಯಮಿತಕ್ಕೆ ಸೇರಿದ ಪ್ರದೇಶದಲ್ಲಿ “ಎಕ್ಸ್ ಪಿರಿಯನ್ಸ್ ಬೆಂಗಳೂರು” ಕೇಂದ್ರ ಅಭಿವೃದ್ಧಿ ಸೇರಿದಂತೆ ಹಲವಾರು ಯೋಜನೆಗಳನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ 2021ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದಾರೆ.

Advertisement

*ಬೈಯ್ಯಪ್ಪನ ಹಳ್ಳಿಯಲ್ಲಿರುವ ಎನ್ ಜಿಇಎಫ್ ನಲ್ಲಿ ಹಾಗೂ ಇನ್ನೂ ಮೂರು ಕಡೆಗಳಲ್ಲಿ ವೃಕ್ಷೋದ್ಯಾನಗಳ ಅಭಿವೃದ್ಧಿ. ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ.

*14,788 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 58.2 ಕಿಲೋ ಮೀಟರ್ ಉದ್ದದ ಹೊರ ವರ್ತುಲ ರಸ್ತೆ ಏರ್ ಪೋರ್ಟ್ ಮೆಟ್ರೋ ಜಾಲ ಹಂತ 2 ಎ ಮತ್ತು 2 ಬಿ ಅನುಷ್ಠಾನ.

*ಉಪ ನಗರ ರೈಲು ಯೋಜನೆಗೆ 2021-22ನೇ ಸಾಲಿಗೆ 850 ಕೋಟಿ ರೂಪಾಯಿ ಅನುದಾನ.

*ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಕಟ್ಟಡ ನಿರ್ಮಾಣ ಶೀಘ್ರ ಪೂರ್ಣ, ಗರಿಷ್ಠ ವಾರ್ಷಿಕ ಪ್ರಯಾಣಿಕರ ಸಾಮರ್ಥ್ಯ 60 ದಶಲಕ್ಷಕ್ಕೆ ಹೆಚ್ಚಳ.

Advertisement

*ಕೋರಮಂಗಳ ಕಣಿವೆಯನ್ನು ಪ್ರವಾಸಿ ಆಕರ್ಷಣೆಯಾಗಿ ಅಭಿವೃದ್ಧಿಪಡಿಸುವ 169 ಕೋಟಿ ರೂ.ವೆಚ್ಚದಲ್ಲಿ ಕೋರಮಂಗಲ ಕಣಿವೆ ರಾಜಕಾಲುವೆ ಅಭಿವೃದ್ಧಿ ಮತ್ತು ನಿರ್ವಹಣೆ (ಕೆ-100) ಯೋಜನೆ ಅನುಷ್ಠಾನ.

*ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ.

*ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆಸಿ ವ್ಯಾಲಿ ಆವರಣದ 248 ಎಂಎಲ್ ಡಿ ಸಾಮರ್ಥ್ಯದ ಎಸ್ ಟಿಪಿ ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ.

*ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ ಕ್ರಮ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ.

*ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ ಸ್ಥಾಪನೆ. ಉತ್ತರ ಬೆಂಗಳೂರಿನಲ್ಲಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.

*28 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಗ್ಯಾಸ್ಟ್ರೊಎಂಟ್ರಾಲಜಿ ಸೈನ್ಸಸ್ ಹಾಗೂ ಆರ್ಗನ್ ಟ್ರಾನ್ಸ್ ಪ್ಲಾಂಟ್ ಸಂಸ್ಥೆ ಪ್ರಸಕ್ತ ಸಾಲಿನಲ್ಲಿ ಕಾರ್ಯಾರಂಭ.

 

Advertisement

Udayavani is now on Telegram. Click here to join our channel and stay updated with the latest news.

Next