ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ್ದು, ನಿರೀಕ್ಷೆಯಂತೆ ಕೋವಿಡ್ ಸಂಕಷ್ಟದ ಹಿನ್ನೆಯಲ್ಲಿ ಈ ವರ್ಷ ಯಾವುದೇ ಹೊಸ ತೆರಿಗೆಯನ್ನು ವಿಧಿಸುವುದಿಲ್ಲ ಎಂದು ಘೊಷಿಸಿದ್ದಾರೆ.
ಇದನ್ನೂ ಓದಿ: ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ ಆಕ್ರೋಶ
ಈ ಬಾರಿ ಯಾವುದೇ ತೆರಿಗೆ ಕಡಿತ ಮಾಡದೇ, ಹೊಸ ತೆರಿಗೆಯನ್ನು ವಿಧಿಸದೇ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗದ ರೀತಿಯಲ್ಲಿ ಬಜೆಟ್ ಮಂಡಿಸಿರುವುದಾಗಿ ಬಿಎಸ್ ವೈ ತಿಳಿಸಿದ್ದಾರೆ.
ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ ಎಂದು ಬಿಎಸ್ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ ಇಲ್ಲ ಎಂದು ಬಿಎಸ್ ವೈ ತಿಳಿಸಿದ್ದು, ನೋಂದಣಿ,ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದರು. 45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ ಎಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.