Advertisement

ಜನಸಮಾನ್ಯರ ಬದುಕು ಸುಗಮಗೊಳಿಸುವ ಬಜೆಟ್‌: ಡಾ. ಕೆ.ಸುಧಾಕರ್‌

09:53 PM Mar 04, 2022 | Team Udayavani |

ಬೆಂಗಳೂರು: ಕಾಮನ್‌ ಮ್ಯಾನ್‌ ಮುಖ್ಯಮಂತ್ರಿ ಅವರಿಂದ ಕಾಮನ್‌ ಮ್ಯಾನ್‌ ಬಜೆಟ್‌ ಇದಾಗಿದ್ದು, ಜನಸಾಮಾನ್ಯರ ಬದುಕು ಸುಗಮಗೊಳಿಸುವ ಆಯವ್ಯಯ ಇದಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

Advertisement

ರಾಜ್ಯ ಬಿಜೆಪಿ ಸರ್ಕಾರ ಮಂಡಿಸಿದ 2022-2023ರ ಬಜೆಟ್‌ ದೂರದೃಷ್ಟಿಯ ಆಯವ್ಯಯವಾಗಿದ್ದು, ಇದು ಕೇವಲ ಘೋಷಣೆಯಾಗದೆ ಜನಸಾಮಾನ್ಯರ ಬಜೆಟ್‌ ಆಗಿದೆ. ಮುಖ್ಯಮಂತ್ರಿ ಅವರು ನವ ಭಾರತಕ್ಕಾಗಿ ನವ ಕರ್ನಾಟಕ ಎನ್ನುವ ಕಲ್ಪನೆಯೊಂದಿಗೆ ಈ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಸಮಾಜದ ಎಲ್ಲಾ ವರ್ಗ, ಕ್ಷೇತ್ರಗಳನ್ನು, ರಾಜ್ಯದ ಎಲ್ಲಾ ಪ್ರಾದೇಶಿಕ ಭಾಗಗಳ ಜನರ ಆಶೋತ್ತರಗಳನ್ನು ಮುಟ್ಟುವಂತಹ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಬಜೆಟ್‌ ಇದಾಗಿದೆ. ಆರೋಗ್ಯ, ಶಿಕ್ಷಣ, ಕೃಷಿ ಸೇರಿದಂತೆ ಮೂಲಕ ಸೌಕರ್ಯಗಳಿಗೆ ಒತ್ತುಕೊಟ್ಟು ಬಜೆಟ್‌ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ರಸ್ತೆಗಳ ಅಭಿವೃದ್ಧಿ, ಹಲವು ಆರೋಗ್ಯ ಯೋಜನೆಗಳು, ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ, ಆಶಾ ಕಾರ್ಯಕರ್ತೆರ ಗೌರವ ಧನ ಹೆಚ್ಚಳ ಮಾಡಿ ಆರೋಗ್ಯ ಕರ್ನಾಟಕದ ಕಡೆಯೂ ಗಮನ ಕೊಡಲಾಗಿದೆ. ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರ ಸ್ಥಾಪನೆ ಮೂಲಕ ಉತ್ತರ ಕರ್ನಾಟಕ ಭಾಗದ ಹೃದ್ರೋಗ ಸಂಬಂಧ ಕಾಯಿಲೆಗಳಿಗೆ ಅಲ್ಲೇ ಚಿಕಿತ್ಸೆ ಸಿಗುವಂತೆ ಮಾಡುವ ಯೋಜನೆ ರೂಪಿಸಲಾಗಿದೆ. ಬೆಳಗಾವಿಯಲ್ಲಿ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರವೂ ಸ್ಥಾಪನೆಯಾಗಲಿದೆ. ರಾಜ್ಯದಲ್ಲಿ ‘ನಮ್ಮ ಕ್ಲಿನಿಕ್‌’ ಸ್ಥಾಪನೆ ಮಾಡಿ, ಸಾಂಕ್ರಾಮಿಕವಲ್ಲದ ರೋಗಗಳಿಗೆ ನಮ್ಮ ಕ್ಲಿನಿಕ್‌???ನಲ್ಲಿ ಚಿಕಿತ್ಸೆ ಕೊಡಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ನೀರಾವರಿ ಯೋಜನೆಗಳಿಗೆ ಬಜೆಟ್‌??ನಲ್ಲಿ ಬರಪೂರ ಅನುದಾನ ಸಿಕ್ಕಿದೆ. ಮೇಕೆದಾಟು ಯೋಜನೆಗೆ 1000 ಕೋಟಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ 5000 ಕೋಟಿ ಹಾಗೂ ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ನೀಡುವ ಮೂಲಕ ನೀರಾವರಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಎತ್ತಿನ ಹೊಳೆ ಯೋಜನೆ ಮೂಲಕ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದ ಜನರ ನೀರಿನ ಬವಣೆ ತೀರಿಸಲು ಸರ್ಕಾರ ಯೋಜನೆ ರೂಪಿಸಿ ಅನುದಾನ ನೀಡಿದೆ.

ಕಾಶಿ ಯಾತ್ರೆ ಮಾಡುವ 30 ಸಾವಿರ ಯಾತ್ರಾರ್ಥಿಗಳಿಗೆ 5 ಸಾವಿರ ರೂ.ಗಳ ಸಹಾಯಧನ ಸಿಗಲಿದೆ. ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ದತ್ತಪೀಠದಲ್ಲಿ ರೋಪ್‌ ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಾಗಿಡುವುದು. ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್‌ ವೇ ನಿರ್ಮಾಣದಂತಹ ಕಾರ್ಯಗಳಿಗೆ ಯೋಜನೆ ರೂಪಿಸಲಾಗಿದೆ. ಇದೊಂದು ಉತ್ತಮ ಬಜೆಟ್‌ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next