Advertisement

ಕರ್ನಾಟಕ ಬಜೆಟ್ 2022: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್- ಜಾತಿವಾರು ಅನುದಾನ ಘೋಷಣೆ

03:57 PM Mar 04, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ(ಮಾರ್ಚ್ 04) ಮಂಡಿಸಿರುವ ತಮ್ಮ ಚೊಚ್ಚಲ ಬಜೆಟ್ ನಲ್ಲಿ ಬಹುತೇಕ ಜಾತಿವಾರು ಅನುದಾನ ಘೋಷಿಸಿದ್ದು, ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರೀಯ, ಮೇದಾರ, ಕುಂಚಿ, ಕುರ್ಮ, ಪಿಂಜಾರ/ನದಾಫ್, ಕುರುಬ, ಬಲಿಜ, ಈಡಿಗ, ಹಡಪದ ಹಾಗೂ ಇತರೆ ಜನಾಂಗದ ಅಭಿವೃದ್ಧಿಗೆ 400 ಕೋಟಿ ರೂ. ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

ಜಾತಿವಾರು ಅನುದಾನ ವಿವರ:

*ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಿಸಿದ್ದು, ಪ್ರಸಕ್ತ ಸಾಲಿನಲ್ಲಿ ತಲಾ 100 ಕೋಟಿ ರೂ.ಗಳ ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು.

* ಮರಾಠ ಅಭಿವೃದ್ಧಿ ನಿಗಮದ ಮೂಲಕ 50 ಕೋಟಿ ರೂ.ಗಳ ಮೊತ್ತದಲ್ಲಿ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲಾಗುವುದು.

* ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ.

Advertisement

*ಶಿವಶರಣೆ ನಲೂರು ನಿಂಬೆಕ್ಕರವರ ಜನ್ಮಸ್ಥಳ ಅಭಿವೃದ್ಧಿ

*ಶ್ರೀಮಡಿವಾಳ ಮಾಚಿದೇವ ಮೂಲಸ್ಥಾನ ದೇವರಹಿಪ್ಪರಗಿಯನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕ ಯಾತ್ರಾ ಸ್ಥಳವನ್ನಾಗಿ ಮಾಡಲಾಗುವುದು.

*ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸ್ಪೋಕನ್ ಇಂಗ್ಲಿಷ್ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು ಐದು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು

*ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸಲು 10 ಕೋಟಿ ರೂ. ಅನುದಾನ

*ನಾಡಿನ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ

* ಜೈನ್, ಸಿಖ್ ಮತ್ತು ಬೌದ್ಧ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ

*ಅಲ್ಪ ಸಂಖ್ಯಾತರ ಇಲಾಖೆಯಡಿಯಲ್ಲಿನ ಪರವಾನಗಿ ಪಡೆದಿರುವ ಬೀದಿ ಬದಿ ವ್ಯಾಪಾರಿಗಳು, ತಳ್ಳುಗಾಡಿ, ಹೂ ಮಾರಾಟಗಾರರು, ಸಣ್ಣಪುಟ್ಟ ತರಕಾರಿ ಮತ್ತು ಹಣ್ಣು ವ್ಯಾಪಾರಿಗಳಿಗೆ ಹಾಗೂ ಆಟೋ ಚಾಲಕರಿಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸಹಯೋಗದೊಂದಿಗೆ ಆರ್ಥಿಕ ಸಹಾಯ.

Advertisement

Udayavani is now on Telegram. Click here to join our channel and stay updated with the latest news.

Next