ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಮಾರ್ಚ್ 04) ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸಿದ್ದು, ಈ ಬಾರಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ ಎಂಬುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ:INDvsSL: ಸೆಂಚುರಿ ಟೆಸ್ಟ್ ನಲ್ಲೂ ದಾಖಲೆ ಬರೆದ ವಿರಾಟ್ ಕೊಹ್ಲಿ
ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಜನರ ಮೇಲೆ ಯಾವುದೇ ತೆರಿಗೆ ಹೊರೆ ಹೊರಿಸದೇ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಆದ್ಯತ ನೀಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ಸುಂಕ ಹೆಚ್ಚಳ ಮಾಡದೇ ಇರಲು ನಿರ್ಧರಿಸಿದ್ದರಿಂದ ಬಸ್ ಪ್ರಯಾಣ ದರ ಏರಿಕೆಯ ಹೊರೆ ತಪ್ಪಿದಂತಾಗಿದೆ.
2022-23ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2,100 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಅನ್ನು ನಾಲ್ಕು ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದು ಘೋಷಿಸಲಾಗಿದೆ.
ಹಾಲಿ ಬಜೆಟ್ ನಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ರೂಪಾಯಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ, ರಾಜ್ಯ ಅಬಕಾರಿ ಇಲಾಖೆಗೆ 29,000 ಕೋಟಿ ರೂ ಹಾಗೂ ಸಾರಿಗೆ ಇಲಾಖೆಗೆ 8,007 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ.