Advertisement

Karnataka Budget 2022: ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಇತರ ಜಿಲ್ಲೆಗಳಿಗೆ ಸಿಕ್ಕಿದ್ದೇನು?

04:38 PM Mar 04, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಮಾರ್ಚ್ 04) ಮಂಡಿಸಿರುವ 2022-23ನೇ ಸಾಲಿ ಅಯವ್ಯಯ ಮುಂಗಡ ಪತ್ರದಲ್ಲಿ ರಾಜ್ಯದ ಯಾವ ಜಿಲ್ಲೆಗಳಿಗೆ ಏನೆಲ್ಲಾ ಕೊಡುಗೆ ಘೋಷಿಸಿದ್ದಾರೆ ಎಂಬ ಕಿರು ಮಾಹಿತಿ ಇಲ್ಲಿದೆ..

Advertisement

ಇದನ್ನೂ ಓದಿ:ಸಿಎಂ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಬಗ್ಗೆ ಜನ ಏನಂತಾರೆ ?

ಜಿಲ್ಲಾವಾರು ಘೋಷಣೆ:

*ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೆ ಏರಿಕೆ

*ಶಿವಮೊಗ್ಗದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಆಯುಷ್ ವಿವಿ ಬಲಪಡಿಸಲಾಗುವುದು

Advertisement

*ಹಾವೇರಿ ಜಿಲ್ಲೆ ಸವಣೂರು ತಾಲೂಕಿನಲ್ಲಿ ಒಂದು ಹೊಸ ಆಯುರ್ವೇದ ಕಾಲೇಜು ಸ್ಥಾಪನೆ

*ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಆಯುಷ್ ವಿಭಾಗ ಪ್ರಾರಂಭಿಸಲಾಗುವುದು.

*ರಾಮನಗರದ ಅರ್ಚಕರ ಗ್ರಾಮದಲ್ಲಿ ರಾಜೀವ್ ಗಾಂಧಿ ವಿಜ್ಞಾನಗಳ ವಿವಿ ಕ್ಯಾಂಪಸ್ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

*ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರ 250 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ

*ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಡಿಯಲ್ಲಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಮೂರು ಹಂತದಲ್ಲಿ ಮೊಡ್ಯುಲರ್ ವಿಧಾನದಲ್ಲಿ ನಿರ್ಮಾಣ.

*ಕ್ಯಾನ್ಸರ್ ರೋಗಿಗಳಿಗೆ ಸಮೀಪದಲ್ಲಿ ಸಕಾಲಿಕ ಮಿತವ್ಯಯದಾಯಕ ಚಿಕಿತ್ಸೆ ಒದಗಿಸಲು ಈಗಾಗಲೇ ಬೆಂಗಳೂರು, ತುಮಕೂರು, ಕಲಬುರಗಿಯಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ.

*ಪ್ರಸಕ್ತ ಸಾಲಿನಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಆಸ್ಪತ್ರೆಯನ್ನು 50 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪನೆ.

*ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ

*ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆಗೆ ಉದ್ದೇಶಿಸಲಾಗಿದ್ದು, ಪ್ರಸಕ್ತ ವರ್ಷ 10 ಕೋಟಿ ರೂ. ಒದಗಿಸಲಾಗುವುದು.

*ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ

*ಹಿರೇಕೇರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ

*ಮೆಣಸು ಮತ್ತು ಸಾಂಬಾರ ಪದಾರ್ಥಗಳ ಗುಣಮಟ್ಟ ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ

*ಹಾನಗಲ್ ನಲ್ಲಿ ಮಾವು ಸಂಸ್ಕರಣಾ ಘಟಕ

*ಹಾವೇರಿಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ

*ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ ಎರಡನೇ ಹಂತವನ್ನು 445 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ.

*ರಾಯಚೂರು ವಿವಿಯಲ್ಲಿ ಪ್ರಯೋಗಾಲಯ ಸ್ಥಾಪಿಸಲು 15 ಕೋಟಿ

*ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ನಿಲಯಗಳ ಸಮುಚ್ಛಯ ನಿರ್ಮಾಣ.

Advertisement

Udayavani is now on Telegram. Click here to join our channel and stay updated with the latest news.

Next